ಕಡಬ: ಸರಸ್ವತೀ ವಿದ್ಯಾಲಯ ಪ್ರೌಢಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ

ಸರಸ್ವತೀ ವಿದ್ಯಾಲಯ ಪ್ರೌಢಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ನಡೆಯಿತು. ವಿದ್ಯಾರ್ಥಿಗಳನ್ನು ಆರತಿ ಬೆಳಗಿ ಸಿಹಿಯನ್ನು ನೀಡಿ ಸ್ವಾಗತಿಸಲಾಯಿತು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಭಾರತ ಮಾತೆಗೆ ಪುಷ್ಪಾರ್ಚನೆ ಮಾಡಿ ಹಿರಿಯರ ಆಶೀರ್ವಾದ ಪಡೆದುಕೊಂಡರು.

ವೇದಿಕೆಯಲ್ಲಿ ಸಂಸ್ಥೆಯ ಸಂಚಾಲಕರಾದ ಶ್ರೀಮತಿ ಸವಿತಾಶಿವಸುಬ್ರಹ್ಮಣ್ಯ ಭಟ್ ಉಪಸ್ಥಿತರಿದ್ದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ವೇದಿಕೆಯಲ್ಲಿ ಉಪಸ್ಥಿತರಿದ್ದ ಮುಖ್ಯ ಗುರುಗಳಾದ ಶ್ರೀಮತಿ ಶೈಲಶ್ರೀ ರೈ ಎಸ್ ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿಯ ಸದಸ್ಯರಾದ ಶ್ರೀ ಚಿನ್ನಪ್ಪ ಗೌಡ ಚೊಟ್ಟೆಮಜಲು, ಶಿಕ್ಷಕ-ಶಿಕ್ಷಕೇತರ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

add - Friends flywood

Related Posts

Leave a Reply

Your email address will not be published.