ಕಡಬ – ನದಿಗೆ ಹಾರಿ ಉದ್ಯಮಿ ಆತ್ಮಹತ್ಯೆ

ಕಡಬದ ಆಲಂಕಾರು ಶ್ರೀ ದುರ್ಗಾಂಬಾ ಜನರಲ್ ಸ್ಟೋರ್‍ನ ಮಾಲಕ, ಆಲಂಕಾರು ನಿವಾಸಿ ಚಂದ್ರಶೇಖರ ಪೂಜಾರಿ ಶಾಂತಿಮೊಗರು ಸೇತುವೆಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇಂದು ಮುಂಜಾನೆ 5 ಗಂಟೆ ವೇಳೆಗೆ ಮನೆಯಲ್ಲಿ ಚೀಟಿ ಬರೆದು ತನ್ನ ಕಾರಿನಲ್ಲಿ ಶಾಂತಿಮೊಗರುಗೆ ಹೋದವರು ಅಲ್ಲಿ ಸೇತುವೆ ಮೇಲೆ ಕಾರು ನಿಲ್ಲಿಸಿ ಬಲೂನ್ ಕಟ್ಟಿಕೊಂಡು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಚಂದ್ರಶೇಖರ ಅವರು ಆಲಂಕಾರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ಮಾಜಿ ಅಧ್ಯಕ್ಷರಾಗಿದ್ದು, ಹಾಲಿ ನಿರ್ದೇಶಕರಾಗಿಯೂ ಸೇವೆ ಸಲ್ಲಿಸುತ್ತಿದ್ದರು. ಶರವೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ, ಆಲಂಕಾರು ಶ್ರೀ ದುರ್ಗಾಂಬಾ ಕಲಾ ಸಂಘದಲ್ಲೂ ಸಕ್ರೀಯರಾಗಿದ್ದರು. ಯಕ್ಷಗಾನ ಅರ್ಥದಾರಿಯೂ ಆಗಿದ್ದರು. ಮೃತರು ಪತ್ನಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ. ಸ್ಥಳಕ್ಕೆ ಬೆಳ್ಳಾರೆ ಮತ್ತು ಕಡಬ ಪೊಲೀಸರು ಆಗಮಿಸಿ ಮಾಹಿತಿ ಪಡೆದಿದ್ದಾರೆ.
