ಕಡಂದಲೆ : ಮನೆಯ ಮೇಲೆ ಮರ ಬಿದ್ದು ಹಾನಿ
ಮೂಡುಬಿದಿರೆ : ಕಡಂದಲೆ ಗ್ರಾಮ ವ್ಯಾಪ್ತಿಯ ಬಾರಬೆಟ್ಟುವಿನ ಅಣ್ಣಿ ಎಂಬವರ ಮನೆ ಮೇಲೆ ಬುಧವಾರ ಸಂಜೆ ಭಾರೀ ಗಾತ್ರದ ಮರವೊಂದು ಬಿರುಗಾಳಿಗೆ ಉರುಳಿ ಬಿದ್ದು ಮನೆಗೆ ತೀವ್ರ ಹಾನಿ ಯುಂಟಾಗಿದೆ.
ಯಾವುದೇ ಜೀವಾಪಾಯವಾಗಿಲ್ಲ. ಸ್ಥಳೀಯರು ಕೂಡಲೇ ಧಾವಿಸಿ ಮನೆಗೆ ಬಿದ್ದ ಮರವನ್ನು ತೆರವು ಮಾಡಲು ಸಹಕರಿಸಿದರು. ಸ್ಥಳಕ್ಕೆ ಗ್ರಾ.ಪಂ. ಮಾಜಿ ಅಧ್ಯಕ್ಷ, ಹಾಲಿ ಸದಸ್ಯ ದಿನೇಶ್ ಕಂಗ್ಲಾಯಿ, ಪಿಡಿಓ ರಕ್ಷಿತಾ, ವಿಎ ಅನಿಲ್ ಕುಮಾರ್ ಆಗಮಿಸಿ ಪರಿಶೀಲನೆ ನಡೆಸಿದರು.