ಕದ್ರಿ ಪಾರ್ಕ್ ಸಮೀಪದಲ್ಲಿ ಡ್ರೈನೇಜ್ ಸಮಸ್ಯೆ :ಮೂಗು ಮುಚ್ಚಿಕೊಂಡು ಸಂಚರಿಸುತ್ತಿರುವ ಸವಾರರು

ಮಂಗಳೂರಿನ ಕದ್ರಿ ಪಾರ್ಕ್ ಸಮೀಪದಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ನಡೆಯುತ್ತಿದ್ದು, ಡ್ರೈನೇಜ್ ನೀರು ರಸ್ತೆಯಲ್ಲಿ ಹರಿಯುತ್ತಿದೆ. ಕಳೆದ ಕೆಲವು ದಿನಗಳಿಂದ ಹರಿಯುತ್ತಿದ್ದು, ರಸ್ತೆಯಲ್ಲಿ ಸಂಚರಿಸುವ ಪಾದಚಾರಿಗಳು ಸೇರಿದಂತೆ ವಾಹನ ಸವಾರರು ಮೂಗು ಮುಚ್ಚಿಕೊಂಡು ನಡೆದಾಡಬೇಕಾದ ಪರಿಸ್ಥಿತಿ ಬಂದೋದಗಿದೆ. ಕೂಡಲೇ ಸಂಬಂಧಪಟ್ಟ ಜನಪ್ರತಿನಿಧಿಗಳು, ಅಧಿಕಾರಿಗಳು ಎಚ್ಚೆತ್ತುಕೊಂಡು ಡ್ರೈನೇಜ್ ಸಮಸ್ಯೆಯನ್ನು ಸರಿಪಡಿಸಬೇಕಾಗಿದೆ.
