ಬಂಟ್ವಾಳ: ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಕಲ್ಲಡ್ಕ ವಲಯ ಬಂಟರ ಸಂಘಕ್ಕೆ ಸಮಗ್ರ ಪ್ರಶಸ್ತಿ
ಬಂಟ್ವಾಳ: ಬಂಟರ ಸಂಘದ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಬಂಟರ ಸಂಘ ಕಲ್ಲಡ್ಕ ವಲಯ ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ.
ಕಲ್ಲಡ್ಕ ವಲಯವು ಸತತ ಮೂರು ವರ್ಷಗಳಿಂದಲೂ ಸಮಗ್ರ ಪ್ರಶಸ್ತಿಯನ್ನು ತಮ್ಮದಾಗಿಸಿಕೊಳ್ಳುವುದು ಹೆಮ್ಮೆಯ ವಿಷಯವಾಗಿದೆ.
ಸಮಗ್ರ ಪ್ರಶಸ್ತಿಯನ್ನು ವಲಯ ಬಂಟರ ಸಂಘದ ಅಧ್ಯಕ್ಷ ಕೆ.ಪದ್ಮನಾಭ ರೈ, ಕಾರ್ಯದರ್ಶಿ ಗಣೇಶ್ ಶೆಟ್ಟಿ ಗೋಳ್ತಮಜಲು, ಪದಾಧಿಕಾರಿಗಳು, ಕ್ರೀಡಾಪಟುಗಳು ಉಪಸ್ಥಿತರಿದ್ದು ಸ್ವೀಕರಿಸಿದರು.
ತಾಲೂಕು ಬಂಟರ ಸಂಘದ ಚಂದ್ರಹಾಸ ಡಿ ಶೆಟ್ಟಿ, ಕಾರ್ಯದರ್ಶಿ ಜಗನ್ನಾಥ ಚೌಟ ಮೊದಲಾದವರು ಉಪಸ್ಥಿತರಿದ್ದರು.