ಕಲ್ಲಾಪು : ನೇತ್ರಾವತಿ ನದಿಯ ತಂತ್ರಿ ರಸ್ತೆ ಬಳಿ ಅಪರಿಚಿತ ಮೃತದೇಹ ಪತ್ತೆ
ಕಲ್ಲಾಪು ಸನಿಹ ನೇತ್ರಾವತಿ ನದಿಯ ತಂತ್ರಿ ರಸ್ತೆ ಬಳಿ ಅಪರಿಚಿತ ಮೃತದೇಹ ಪತ್ತೆಯಾದ ಘಟನೆ ಜ.30ರ ಸೋಮವಾರ ಬೆಳಗ್ಗೆ ನಡೆದಿದೆ.ಮೂರು ದಿನಗಳ ಹಿಂದೆ ನದಿಗೆ ಬಿದ್ದು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದ್ದು, ಲುಂಗಿ, ಟೀಶರ್ಟ್ ಧರಿಸಿದ್ದು ಕೈಯಲ್ಲಿ ವಾಚ್, ಕೂಡ ಪತ್ತೆಯಾಗಿದೆ.ಮೃತದೇಹ ಸಂಪೂರ್ಣ ಕೊಳೆತ ಸ್ಥಿತಿಯಲ್ಲಿದ್ದು,ಉಳ್ಳಾಲ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ಕೈಗೆತ್ತಿಕೊಂಡಿದ್ದಾರೆ.ಬಜಾಲ್ ಅಥವಾ ಬಂಟ್ವಾಳ ಭಾಗದಲ್ಲಿ ನದಿಗೆ ಬಿದ್ದಿರುವ ಶಂಕೆ ವ್ಯಕ್ತವಾಗಿದ್ದು , ನದಿ ಮಧ್ಯದಲ್ಲಿ ತೇಲುತ್ತಿದ್ದ ಮೃತದೇಹವನ್ನುಸಮಾಜ ಸೇವಕ ಪ್ರೇಮ್ ಪ್ರಕಾಶ್ ಡಿಸೋಜ ಅವರು ದಡಕ್ಕೆ ಸೇರಿಸಿ ಮಾನವೀಯತೆ ಮೆರೆದರು