ಕಾಡಾನೆ ದಾಳಿಯಿಂದ ಗಂಭೀರ ಗಾಯಗೊಂಡ ಅಯ್ಯಪ್ಪ ಮಾಲೆಧಾರಿ ಯುವಕ
ಕಲ್ಮಕಾರು : ಕಾಡಾನೆ ದಾಳಿಯಿಂದ ಗಂಭೀರ ಗಾಯಗೊಂಡ ಅಯ್ಯಪ್ಪ ಮಾಲೆಧಾರಿ ಯುವಕ,ಸ್ನಾನಕ್ಕೆ ತೆರಳಿದ ಅಯ್ಯಪ್ಪ ಮಾಲೆಧಾರಿಯೊಬ್ಬರ ಮೇಲೆ ಇಂದು ಮುಂಜಾನೆ ಕಾಡಾನೆಯೊಂದು ದಾಳಿ ಮಾಡಿದ ಪರಿಣಾಮ ಅವರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ. ಕಲ್ಮಕಾರು ಗ್ರಾಮದ ಚರಿತ್ ಎಂಬವರು ಆನೆ ದಾಳಿಗೆ ಒಳಗಾದ ಯುವಕ. ಡಿ.17 ರ ಮುಂಜಾನೆ ಸ್ನಾನದ ಬಳಿಕ ನೀರಿನ ತೋಡಿನಲ್ಲಿ ಬಟ್ಟೆ ತೊಳೆಯುತ್ತಿದ್ದಾಗ ಈ ಘಟನೆ ನಡೆದಿದೆ.ಅಯ್ಯಪ್ಪ ವೃತಧಾರಿಗಳು ತಂಗುವ ಟೆಂಟ್ ಸಮೀಪದಲ್ಲೇ ಘಟನೆ ನಡೆದಿದ್ದು, ಗಾಯಾಳು ಅಯ್ಯಪ್ಪ ಮಾಲೆಧಾರಿಯನ್ನು ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದೊಯ್ಯಲಾಗಿದೆ.