ಮಂಗಳೂರು: ಡಿ.23ರಂದು ಕಣಚೂರು ಸಂಸ್ಥೆಯ ವತಿಯಿಂದ ಕಿಮ್ಸ್ ಪಿ.ಜಿ. ಮೆಡಿಕ್ವಿಜ್-2023

ಮಂಗಳೂರಿನ ಕಣಚೂರು ವೈದ್ಯಕೀಯ ಶಿಕ್ಷಣ ಮಹಾವಿದ್ಯಾಲಯದ ವೈದ್ಯಕೀಯ ಶಾಸ್ತ್ರ ವಿಭಾಗದ ಆಶ್ರಯದಲ್ಲಿ ಸ್ನಾತಕೋತ್ತರ ವೈದ್ಯಕೀಯ ಶಾಸ್ತ್ರ ಶಿಕ್ಷಣ ವಿದ್ಯಾರ್ಥಿಗಳಿಗಾಗಿ ೩ನೇ ವಾರ್ಷಿಕ ರಾಜ್ಯ ಮಟ್ಟದ ಅಂತರ ವೈದ್ಯಕೀಯ ಕಾಲೇಜು ರಸಪ್ರಶ್ನೆ ಕಿಮ್ಸ್ ಪಿ.ಜಿ. ಮೆಡಿಕ್ವಿಜ್-2023 ಸ್ಪರ್ಧಾಕೂಟವು ಡಿ.23ರಂದು ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಿದ್ದಾರೆ.
ರಾಜ್ಯದಲ್ಲಿ ಕಾರ್ಯಾಚರಿಸುತ್ತಿರುವ ವೈದ್ಯಕೀಯ ಶಿಕ್ಷಣ ಮಹಾ ವಿದ್ಯಾಲಯದ ಪ್ರಾಂಶುಪಾಲರು ತಮ್ಮ ಕಾಲೇಜಿನ ವೈದ್ಯಕೀಯ ಶಾಸ್ತ್ರ ವಿಭಾಗದ ಸ್ನಾತಕೋತರ ವೈದ್ಯಕೀಯ ವಿದ್ಯಾರ್ಥಿಗಳನ್ನು ಒಳಗೊಂಡ ತಂಡದ ಹೆಸರುಗಳನ್ನು ಸ್ಪರ್ಧಾಕೂಟದಲ್ಲಿ ಭಾಗವಹಿಸಲು ನೋಂದಾಯಿಸಬಹುದು.
ಕಣಚೂರು ವೈದ್ಯಕೀಯ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಹಾಜಿ ಯು.ಕೆ. ಮೋನು ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಸ್ಪರ್ಧಾ ವಿಜೇತರಿಗೆ ಆಕರ್ಷಕ ಪ್ರಶಸ್ತಿ, ಬಹುಮಾನ ಹಾಗೂ ಪ್ರಶಸ್ತಿ ಪ್ರಮಾಣಪತ್ರವನ್ನು ಪ್ರದಾನ ಮಾಡಲಿದ್ದಾರೆ.
ಕಾರ್ಯನಿವಾರ್ಹಕ ನಿರ್ದೇಶಕ ಅಬ್ದುಲ್ ರೆಹಮಾನ್, ಪ್ರಾಂಶುಪಾಲರಾದ ಪ್ರೊ. ಡಾ. ರತ್ನಾಕ ಯು.ಪಿ. ವೈದ್ಯಕೀಯ ಅಧೀಕ್ಷಕರಾದ ಪ್ರೊ. ಡಾ. ಹರೀಶ್ ಶೆಟ್ಟಿ, ಮುಖ್ಯ ಆಡಳಿತ ಅಧಿಕಾರಿ ಡಾ. ರೋಹನ್ ಮೋನಿಸ್ ಮತ್ತು ಕಣಚೂರು ಆರೋಗ್ಯ ವಿಜ್ಞಾನ ಸಂಸ್ಥೆ ಸಮಿತಿಯ ಅಧ್ಯಕ್ಷ ಪ್ರೊ. ಡಾ. ಮೊಹಮ್ಮದ್ ಇಸ್ಮಾಯಿಲ್ ಹಾಗೂ ಸದಸ್ಯರಾದ ಡಾ. ಎಂ.ವಿ. ಪ್ರಭುಗೌರವ ಅತಿಥಿಗಳಾಗಿ ಪಾಲ್ಗೊಳ್ಳಲಿರುವರು.
ಹೆಚ್ಚಿನ ಮಾಹಿತಿ/ವಿವರಗಳಿಗಾಗಿ ಸ್ಪರ್ಧಾ ಕೂಟದ ಸಂಘಟಕರಾದ ಹಾಗೂ ವೈದ್ಯಕೀಯ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಪ್ರೋ| ಡಾ|| ದೇವದಾಸ್ ರೈ 98450 81145 ಇವರನ್ನು ಸಂಪರ್ಕಿಸಬಹುದು.
