ವರಾಹ ರೂಪಂ ಹಾಡಿಗೆ ತಡೆಯಾಜ್ಞೆ

ಬೆಂಗಳೂರು: ಕಾಂತಾರ ಸಿನಿಮಾ ಮಲಯಾಳಂ, ತೆಲುಗು, ತಮಿಳು, ಹಿಂದಿ ಸೇರಿದಂತೆ ಎಲ್ಲಾ ಭಾಷೆಯ ಬಾಕ್ಸ್ ಆಫೀಸ್‌ನಲ್ಲಿ ಸೌಂಡ್ ಮಾಡುತ್ತಿದೆ. ಈ ನಡುವೆ ಕಾಂತಾರ ಸಿನಿಮಾದ ಜನಪ್ರಿಯ ವರಾಹ ರೂಪಂ ಹಾಡು ವಿವಾದ ಆಗಿತ್ತು. ಇದೀಗ ಈ ಹಾಡು ಬಳಸದಂತೆ ಕೋಯಿಕ್ಕೋಡ್ ಕೋರ್ಟ್ ಸೂಚನೆ ನೀಡಿರೋದು ಚಿತ್ರತಂಡಕ್ಕೆ ಬಿಗ್ ಶಾಕ್ ಕೊಟ್ಟಿದೆ.
ಕಾಂತಾರ ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಅವರು ಮಲಯಾಳಂ ಭಾಷೆಯ ‘ನವರಸಂ..’ ಹಾಡಿನಿಂದ ಇದನ್ನು ಕಾಪಿ ಮಾಡಿದ್ದಾರೆ ಎಂಬ ಆರೋಪವನ್ನು ಚಿತ್ರತಂಡ ಎದುರಿಸಿತ್ತು.
ಕಾಂತಾರಾ ಸಿನಿಮಾದ ವರಾಹ ರೂಪಂ ಎನ್ನುವ ಫೇಮಸ್ ಟ್ಯೂನ್ ಅನ್ನು 5 ವರ್ಷ ಹಳೆಯ ಮಲಯಾಳಂ ಸಿನಿಮಾದಿಂದ ಕದ್ದಿದ್ದಾರೆ ಎಂಬ ಮಾತು ಬಂದಿತ್ತು. ಈ ಕುರಿತು ಮಲಯಾಳಂನ ‘ತೈಕ್ಕುಡಂ ಬ್ರಿಡ್ಜ್ ಚಿತ್ರತಂಡ ಕೋರ್ಟ್ ಮೆಟ್ಟಿಲೇರಿತ್ತು.
ಈ ಕೇಸ್ ವಿಚಾರಣೆ ನಡೆಸಿದ ಕೇರಳದ ಕೋಝಿಕೋಡ್ ನ್ಯಾಯಾಲಯ ವರಾಹ ರೂಪಂ ಹಾಡಿಗೆ ತಡೆಯಾಜ್ಞೆ ನೀಡಿದೆ. ಈ ವಿಚಾರವನ್ನು ‘ತೈಕ್ಕುಡಂ ಬ್ರಿಡ್ಜ್’ ತನ್ನ ಸೋಶಿಯಲ್ ಮೀಡಿಯಾ ಪೇಜ್‌ನಲ್ಲಿ ಹಂಚಿಕೊಂಡಿದೆ.