ಪುತ್ತೂರು : ಪುತ್ತೂರಿನಲ್ಲಿ ನ.13ರ ವರೆಗೆ ಕಾನೂನು ಅರಿವು-ನಾಗರಿಕ ಸಬಲೀಕರಣ ಅಭಿಯಾನ

ಪುತ್ತೂರು: ರಾಷ್ಟೀಯ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಅ. 31 ರಿಂದ ನ.13 ರ ವರೆಗೆ ಕಾನೂನು ಅರಿವು ಮತ್ತು ಪ್ರಚಾರ ಅಭಿಯಾನದ ಮೂಲಕ ನಾಗರಿಕರ ಸಬಲೀಕರಣ ಅಭಿಯಾನವನ್ನು ಕಾನೂನು ಸೇವೆಗಳ ಸಮಿತಿ ಮತ್ತು ವಕೀಲರ ಸಂಘ ಹಾಗು ಇತರ ಎಲ್ಲಾ ಇಲಾಖೆಗಳ ಅಧಿಕಾರಿಗಳ ಸಹಯೋಗದೊಂದಿಗೆ ನಡೆಸಲಾಗುವುದು. ಸಾರ್ವಜನಿಕರು ಈ ಅಭಿಯಾನದ ಪ್ರಯೋಜನ ಪಡೆಯುವಂತೆ ಪ್ರಧಾನ ಹಿರಿಯ ವ್ಯವಹಾರಿಕ ನ್ಯಾಯಾಧೀಶ ಮತ್ತು ಹೆಚ್ಚುವರಿ ನ್ಯಾಯಿಕ ದಂಡಾಧಿಕಾರಿ ಹಾಗು ಕಾನೂನು ಸೇವೆಗಳ ಸಮಿತಿ ಅಧ್ಯಕ್ಷರಾಗಿರುವ ಗೌಡ ಆರ್.ಪಿ ಅವರು ತಿಳಿಸಿದ್ದಾರೆ.ಪುತ್ತೂರು ನ್ಯಾಯಾಲಯದ ಕಚೇರಿಯಲ್ಲಿ ಮಾಧ್ಯಮದೊಂದಿಗೆ ಅವರು ಮಾತನಾಡಿ ಅಭಿಯಾನದ ಮಾಹಿತಿ ನೀಡಿದರು. ಅ.31ಕ್ಕೆ ಅಬಿಯಾನಕ್ಕೆ ಚಾಲನೆ ನೀಡಿದ್ದು, ಈಗಾಗಲೇ ಮೂರು ನಾಲ್ಕು ಕಡೆಗಳಲ್ಲಿ ಕಾರ್ಯಕ್ರಮ ನಡೆಸಲಾಗಿದೆ ಎಂದ ಅವರು 2 ವಾರಗಳ ಈ ಅಭಿಯಾನದಲ್ಲಿ ಪ್ರತಿ ಗ್ರಾಮ ಪಂಚಾಯತ್‌ಗಳ ಮೂಲಕ ಹಳ್ಳಿಗಳನ್ನು ತಲುಪುವ ಮತ್ತು ಪ್ರತಿ ಗ್ರಾಮದಲ್ಲೂ ಕನಿಷ್ಟ ಒಂದು ಕಾರ್ಯಕ್ರಮವನ್ನು ವಕೀಲರು, ಅರೆಕಾಲಿಕ ಕಾನೂನು ಸ್ವಯಂ ಸೇವಕರು, ಕಾನೂನು ವಿದ್ಯಾರ್ಥಿಗಳು, ಅಂಗನವಾಡಿ ಕಾರ್ಯಕರ್ತೆಯರು, ಪೋಲಿಸರು, ಶಿಕ್ಷಕರು ಹಾಗೂ ವಿವಿಧ ಸಂಘ ಸಂಸ್ಥೆಗಳ ಮುಖಾಂತರ ಜಿಲ್ಲೆಯ ಗ್ರಾಮೀಣ ಮತ್ತು ದೂರದ ಪ್ರದೇಶಗಳಲ್ಲಿ ವಾಸಿಸುವ ಪ್ರತಿಯೊಬ್ಬ ವ್ಯಕ್ತಿಯನ್ನು ತಲುಪುವ ಬಗ್ಗೆ ಜಾಗೃತಿ ಹಾಗೂ ಪ್ರಚಾರದ ಚಟುವಟಿಕೆಗಳನ್ನು ಆಯೋಜಿಸುವ ಗುರಿಯನ್ನು ಹೊಂದಲಾಗಿದೆ ಎಂದರು.ಸುದ್ದಿಗೋಷ್ಠಿಯಲ್ಲಿ ಪ್ರಧಾನ ವ್ಯವಹಾರಿಕ ನ್ಯಾಯಾಧೀಶ ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿ ಹಾಗು ತಾಲೂಕು ಕಾನೂನು ಸೇವೆಗಳ ಸಮಿತಿಯ ಸದಸ್ಯ ಕಾರ್ಯದರ್ಶಿ ಆಗಿರುವ ಅರ್ಚನಾ ಕೆ. ಉಣ್ಣಿತಾನ್, 2ನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಯೋಗೇಂದ್ರ ಶೆಟ್ಟಿ,ವಕೀಲರ ಸಂಘದ ಅಧ್ಯಕ್ಷ ಮನೋಹರ್ ಕೆ.ವಿ ಉಪಸ್ಥಿತರಿದ್ದರು.

Related Posts

Leave a Reply

Your email address will not be published.