ಕಾಪು: ಮೀನುಗಾರಿಕೆಗೆ ತೆರಳಿದ್ದ ವ್ಯಕ್ತಿ ಬಲೆಯೊಳಗೆ ಸಿಲುಕಿ ಸಾವು

ಮೀನುಗಾರಿಕೆಗೆ ತೆರಳಿದ್ದ ವ್ಯಕ್ತಿ ಬಲೆಗೆ ಸಿಕ್ಕಿಕೊಂಡು ಸಾವನ್ನಪಿದ ಘಟನೆ ಕಾಪುವಿನ ಪೊಲಿಪು ಕಡಲ ಕಿನಾರೆಯಲ್ಲಿ ಶುಕ್ರವಾರ ಮುಂಜಾನೆ ನಡೆದಿದೆ.
ಕಾಪು ಪೊಲಿಪು ನಿವಾಸಿ ಕಿಶೋರ್ (29) ಮೃತ ದುರ್ದೈವಿ.
ಪ್ರತಿದಿನ ಕಯಾಕ್ ಮೂಲಕ ಏಕಾಂಗಿಯಾಗಿ ಮೀನುಗಾರಿಕೆಗೆ ತೆರಳುತ್ತಿದ್ದ ಕಿಶೋರ್ ಶುಕ್ರವಾರ ಮುಂಜಾನೆ ಕೂಡಾ ಏಕಾಂಗಿಯಾಗಿ ಮೀನುಗಾರಿಕೆಗೆ ತೆರಳಿದ್ದು ಮೀನುಗಾರಿಕಾ ಬಲೆಗೆ ಸಿಲುಕಿ ಮೃತಪಟ್ಟಿದ್ದಾರೆ.
ಸಮುದ್ರದಲ್ಲಿ ತೇಲುತ್ತಿದ್ದ ಕಯಾಕ್ ಅನ್ನು ಗಮನಿಸಿದ ಮತ್ತೊಂದು ಬೋಟಿನವರಿಗೆ ಮೃತದೇಹ ಪತ್ತೆಯಾಗಿದೆ. ನಂತರ ದಡಕ್ಕೆ ಕಯಾಕ್ ಹಾಗು ಮೃತದೇಹವನ್ನು ತಂದಿದ್ದಾರೆ.
ಸ್ಥಳಕ್ಕೆ ಕಾಪು ಶಾಸಕ ಗುರ್ಮೆ ಸಹಿತ ಕಾಪು ಪೋಲಿಸರು ಭೇಟಿ ನೀಡಿದ್ದಾರೆ.
