ಕಾಪು : ಬಿಜೆಪಿಯಿಂದ ರೋಡ್ ಶೋ
ಕಾಪು ಕ್ಷೇತ್ರವನ್ನು ಗೆದ್ದು ಬೀಗಿದ ಭಾರತೀಯ ಜನತಾ ಪಾರ್ಟಿಯ ನೂರಾರು ಕಾರ್ಯಕರ್ತರು ಹಾಲಿ ಹಾಗೂ ಮಾಜಿ ಶಾಸಕರನ್ನು ಸೇರಿಕೊಂಡು ಕ್ಷೇತ್ರದ್ಯಾಂತ ರೋಡ್ ಶೋ ನಡೆಸುವ ಮೂಲಕ ವಿಜಯೋತ್ಸವ ಆಚರಿಸಿದ್ದಾರೆ.ಹಾಲಿ ಶಾಸಕ ಸುರೇಶ್ ಶೆಟ್ಟಿ ಗುರ್ಮೆ, ಹಾಗೂ ಮಾಜಿ ಶಾಸಕ ಲಾಲಾಜಿ ಆರ್, ಮೆಂಡನ್ ಉಪಸ್ಥಿತಿಯಲ್ಲಿ ಪಡುಕರೆಯಿಂದ ಚಾಲನೆಗೊಂಡ ರೋಡ್ ಶೋ ಉದ್ಯಾವರ, ಕಟಪಾಡಿ, ಶಿರ್ವ, ಮುದರಂಗಡಿ, ಅಡ್ವೆ, ಪಲಿಮಾರು, ನಂದಿಕೂರು, ಪಡುಬಿದ್ರಿ, ಹೆಜಮಾಡಿ, ಎರ್ಮಾಳು, ಅದಮಾರು, ಕಾಪು ಹೀಗೆ ಕ್ಷೇತ್ರದೆಲ್ಲೆಡೆ ಸಾಗಿ ಅಂತಿಮವಾಗಿ ಶಿರ್ವ ವ್ಯಾಪ್ತಿಯ ಕುಶಲ ಶೇಖರ ಶೆಟ್ಟಿ ಸಭಾಂಗಣದಲ್ಲಿ ಸಮಾರೋಪ ಕಾರ್ಯಕ್ರಮದೊಂದಿಗೆ ಈ ದಿನದ ರೋಡ್ ಶೋ ಅಂತ್ಯ ಕಾಣಲಿದೆ.ಈ ರೋಡ್ ಶೋ ನಲ್ಲಿ ಕಾಪು ಮಂಡಲ ಅಧ್ಯಕ್ಷ ಶ್ರೀಕಾಂತ್ ನಾಯಕ್, ಜಿ.ಪಂ. ಸದಸ್ಯರಾದ ಗೀತಾಂಜಲಿ ಸುವರ್ಣ, ಶಿಲ್ಪಾ ಜಿ. ಸುವರ್ಣ, ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಪಡುಬಿದ್ರಿ ಗ್ರಾ.ಪಂ. ಉಪಾಧ್ಯಕ್ಷೆ ಯಶೋಧ ಪೂಜಾರಿ, ಹೆಜಮಾಡಿ ಗ್ರಾ.ಪಂ. ಅಧ್ಯಕ್ಷ ಪಾಂಡುರಂಗ ಕರ್ಕೇರ ಮುಂತಾದವರಿದ್ದರು.