ಕಾಪುವಿನಲ್ಲಿ ಎಲ್‍ಇಡಿ ಸ್ಕ್ರೀನ್‍ನಲ್ಲಿ ಪ್ರಮಾಣ ವಚನದ ನೇರಪ್ರಸಾರ
ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯನವರು ಪ್ರಮಾಣವಚನ ಸ್ವೀಕಾರ ಮಾಡಿರುವ ದೃಶ್ಯವನ್ನು ಕಾಪು ಕಾಂಗ್ರೆಸ್ ಎಲ್‍ಇಡಿ ಸ್ಕ್ರೀನ್ ಮೂಲಕ ಕಾಪು ಪೇಟೆಯಲ್ಲಿ ಸಾರ್ವಜನಿಕರ ವೀಕ್ಷಣೆಗೆ ಇಟ್ಟು ಸಂಭ್ರಮಾಚರಣೆ ನಡೆಸಿದ್ದಾರೆ.ಸಿದ್ಧರಾಮಯ್ಯ ಹಾಗೂ ಅವರ ತಂಡ ಪ್ರಮಾಣವಚನ ಸ್ವೀಕರಿಸುತ್ತಿದಂತೆ ಕಾಂಗ್ರೆಸ್ ಕಾರ್ಯಕರ್ತರು ಸುಡುಮದ್ದು ಸಿಡಿಸಿ…ಸಾರ್ವಜನಿಕರಿಗೆ ಸಿಹಿ ಹಂಚಿ ಸಿದ್ದರಾಮಯ್ಯ ಹಾಗೂ ವಿನಯ ಕುಮಾರ್ ಸೊರಕೆ ಪರ ಘೋಷಣೆಯನ್ನು ಕೂಗಿ ಸಂಭ್ರಮಿಸಿದರು.ಈ ಸಂದರ್ಭ ಕಾಪು ಕಾಂಗ್ರೆಸ್ ಪಕ್ಷದ ನಾಯಕರು ಹಾಗೂ ನೂರಾರು ಕಾರ್ಯಕರ್ತರು ಇದ್ದರು.