ಕಾಪು: ಹಿಟ್ & ರನ್: ಬೈಕ್ ಸವಾರ ಮೃತ್ಯು
ಜೀಪೊಂದು ಢಿಕ್ಕಿ ಹೊಡೆದ ನಿಲ್ಲಿಸದೇ ಪರಾರಿಯಾದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಬೆಳಪುವಿನ ಮಿಲಿಟರಿ ಕಾಲೋನಿ ಎಂಬಲ್ಲಿ ನಡೆದಿದೆ.
ಮೃತರನ್ನು ಬೆಳಪುವಿನ ಮುಹಮ್ಮದ್ ಹುಸೇನ್(39) ಎಂದು ಗುರುತಿಸ ಲಾಗಿದೆ. ಇವರು ನ.11ರಂದು ಬೆಳಗಿನ ಜಾವ 5ಗಂಟೆ ಸುಮಾರಿಗೆ ಬೈಕಿನಲ್ಲಿ ಹೋಗುತ್ತಿದ್ದಾಗ ಎದುರಿನಲ್ಲಿ ಬಂದ ಜೀಪು ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಬಳಿಕ ಚಾಲಕ ಪ್ರಜ್ವಲ್ ಶೆಟ್ಟಿ ಜೀಪನ್ನು ನಿಲ್ಲಿಸದೆ ಪರಾರಿಯಾಗಿದ್ದನು.
ಬಗ್ಗೆ ಪ್ರಕರಣ ದಾಖಲಿಸಿಕೊಂಡ ಶಿರ್ವ ಪೊಲೀಸರು ಆರೋಪಿ ಪ್ರಜ್ವಲ್ ಶೆಟ್ಟಿ ಹಾಗೂ ಜೀಪವನ್ನು ವಶಪಡಿಸಿಕೊಂಡು ಕಾನೂನು ಕ್ರಮ ಜರಗಿಸಿದ್ದಾರೆ. ಗಂಭೀರವಾಗಿ ಗಾಯಗೊಂಡ ಹುಸೇನ್ ಉಡುಪಿ ಖಾಸಗಿ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತ ಹುಸೇನ್ ರಿಕ್ಷಾ ಚಾಲಕರಾಗಿ ಕೆಲಸ ಮಾಡಿಕೊಂಡಿದ್ದರು.