HomeFresh Newsಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಪ್ರಥಮ ವರ್ಧಂತಿ "ಮಾತೃ ವೈಭವ": ಸುಗಮ ವಾಹನ ಸಂಚಾರ...

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಪ್ರಥಮ ವರ್ಧಂತಿ “ಮಾತೃ ವೈಭವ”: ಸುಗಮ ವಾಹನ ಸಂಚಾರ ವ್ಯವಸ್ಥೆ ,ಪಾರ್ಕಿಂಗ್ ವ್ಯವಸ್ಥೆ ಕುರಿತು ಪೂರ್ವಭಾವಿ ಸಭೆ

ಕಾಪು:ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಪ್ರಥಮ ವರ್ಧಂತಿ “ಮಾತೃ ವೈಭವ” ಕಾರ್ಯಕ್ರಮ ದಿನಾಂಕ 28-02-2026 ರಿಂದ 02-03-2026 3 ದಿನಗಳ ಕಾಲ ನಡೆಯಲಿದ್ದು ಇದರ ಪೂರ್ವಭಾವಿಯಾಗಿ ಇಂದು ಜಿಲ್ಲಾಧಿಕಾರಿಗಳ ಕೋರ್ಟ್ ಹಾಲ್ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಶಾಸಕರು ಹಾಗೂ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಕಾರ್ಯಾಧ್ಯಕ್ಷರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದ್ದರು.

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ 3 ದಿನಗಳಲ್ಲಿ ಲಕ್ಷಾಂತರ ಜನ ಭಕ್ತಾದಿಗಳು ಆಗಮಿಸಲಿರುವುದರಿಂದ ಸುಗಮ ವಾಹನ ಸಂಚಾರ ವ್ಯವಸ್ಥೆ ಹಾಗೂ ಸಮರ್ಪಕ ಪಾರ್ಕಿಂಗ್ ವ್ಯವಸ್ಥೆಯನ್ನು ನಿರ್ವಹಿಸುವಂತೆ ಸಭೆಯಲ್ಲಿ ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಕೆ. ವಾಸುದೇವ ಶೆಟ್ಟಿ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ರತ್ನಾಕರ ಶೆಟ್ಟಿ ನಡಿಕೆರೆ, ಜಿಲ್ಲಾಧಿಕಾರಿಗಳಾದ ಸ್ವರೂಪ ಟಿ.ಕೆ, ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ರವಿಕಿರಣ್, ಅಭಿವೃದ್ಧಿ ಸಮಿತಿ ಪ್ರಧಾನ ಕಾರ್ಯದರ್ಶಿಗಳಾದ ರಮೇಶ್ ಹೆಗ್ಡೆ ಕಲ್ಯ, ಮಾತೃ ವೈಭವ ಸೇವಾ ಸಮಿತಿ ಪ್ರಧಾನ ಕಾರ್ಯದರ್ಶಿ ಯೋಗೀಶ್ ವಿ. ಶೆಟ್ಟಿ, ಮಾತೃ ವೈಭವ ಸೇವಾ ಸಮಿತಿ ಹುಬ್ಬಳ್ಳಿ ವಲಯದ ಕಾರ್ಯಾಧ್ಯಕ್ಷ ಸುಗ್ಗಿ ಸುಧಾಕರ್ ಶೆಟ್ಟಿ, ಮಾತೃ ವೈಭವದ ಕಾನೂನು ಸುವ್ಯವಸ್ಥೆ ಸಮಿತಿಯ ಪ್ರಧಾನ ಸಂಚಾಲಕ ರೋಷನ್ ಕುಮಾರ್ ಶೆಟ್ಟಿ ಹಾಗೂ ಕಾಪು ಪುರಸಭೆ ಮುಖ್ಯಾಧಿಕಾರಿಗಳಾದ ನೀಲಕಂಠ ಮೇಸ್ತಾ, ಪೊಲೀಸ್ ಉಪ ನಿರೀಕ್ಷಕರಾದ ತೇಜಸ್ವಿ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments