ಕಾಪು: ಟೆಂಪೊ ಪಲ್ಟಿ : ಸಂಚಾರ ಅಸ್ತವ್ಯಸ್ತ
ಕಟ್ಟಡ ಸಾಮಾಗ್ರಿಗಳನ್ನು ಸಾಗಿಸುತ್ತಿದ್ದ ಮಿನಿ ಗೂಡ್ಸ್ ಟೆಂಪೋವೊಂದು ಹೆದ್ದಾರಿಗೆ ಅಡ್ಡವಾಗಿ ಮಗುಚಿ ಬಿದ್ದ ಘಟನೆ ಕೊಪ್ಪಲಂಗಡಿಯಲ್ಲಿ ನಡೆದಿದೆ.
ರಾಷ್ಟ್ರೀಯ ಹೆದ್ದಾರಿ 66ರ ಕೊಪ್ಪಲಂಗಡಿ ಬಳಿ ಮಂಗಳೂರಿನಿಂದ ಉಡುಪಿ ಕಡೆಗೆ ತೆರಳುತ್ತಿದ್ದ ಮಿನಿ ಟೆಂಪೋ ಚಾಲಕನ ನಿಯಂತ್ರಣ ತಪ್ಪಿ ಅಡ್ಡ ಬಿದ್ದಿದ್ದು ಇದರಿಂದಾಗಿ ಟೆಂಪೋದಲ್ಲಿದ್ದ ಸಾಮಾಗ್ರಿಗಳು ರಸ್ತೆಗೆ ಅಡ್ಡ ಬಿದ್ದಿವೆ.
ಟೆಂಪೋ ಕೂಡ ರಸ್ತೆಗೆ ಅಡ್ಡವಾಗಿ ಬಿದ್ದಿದ್ದು ಹೆದ್ದಾರಿ ಸಂಚಾರ ಅಸ್ತವ್ಯಸ್ತಗೊಂಡಿದ್ದು, ಸ್ಥಳಕ್ಕೆ ಬಂದ ಕಾಪು ಪೊಲೀಸರು ಸಾರ್ವಜನಿಕರ ಸಹಕಾರದೊಂದಿಗೆ ವಾಹನವನ್ನು ತೆರವುಗೊಳಿಸಿ ಹೆದ್ದಾರಿ ಸಂಚಾರ ಸುಗಮಗೊಳಿಸಿದ್ದಾರೆ.