HomeFresh Newsಕಾರ್ಕಳ: ಡಿ.9ರಂದು ಲೋಕ ಅದಾಲತ್: ಹಳೆಯ ಪ್ರಕರಣ ರಾಜಿ ಮೂಲಕ ಇತ್ಯರ್ಥಪಡಿಸಿಕೊಳ್ಳಲು ಅವಕಾಶ

ಕಾರ್ಕಳ: ಡಿ.9ರಂದು ಲೋಕ ಅದಾಲತ್: ಹಳೆಯ ಪ್ರಕರಣ ರಾಜಿ ಮೂಲಕ ಇತ್ಯರ್ಥಪಡಿಸಿಕೊಳ್ಳಲು ಅವಕಾಶ

ಡಿಸೆಂಬರ್ 9ರಂದು ದೇಶದಾದ್ಯಂತ ನಡೆಯಲಿರುವ ರಾಷ್ಟೀಯ ಲೋಕ ಅದಾಲತ್ ನಲ್ಲಿ ಕಳೆದ ಹಲವಾರು ವರ್ಷಗಳಿಂದ ವಿಚಾರಣೆಗೆ ಬಾಕಿಯಿರುವ ಹಳೆಯ ಪ್ರಕರಣಗಳನ್ನು ಎರಡೂ ಕಕ್ಷಿದಾರರ ಒಪ್ಪಿಗೆ ಮೇರೆಗೆ ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳಲು ಸದವಕಾಶ ಕಲ್ಪಿಸಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ಕಾರ್ಕಳ ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ತಾಲೂಕು ಕಾನೂನು ಸೇವೆಗಳ ಸಮಿತಿಯ ಅಧ್ಯಕ್ಷರಾದ ಶರ್ಮಿಳಾ ಸಿ ಎಸ್ ಹೇಳಿದರು.

ಅವರು ಕುರಿತು ಕಾರ್ಕಳ ನ್ಯಾಯಾಲಯದ ಸಂಕೀರ್ಣದಲ್ಲಿ ಸುದ್ಧಿಗೋಷ್ಟಿ ನಡೆಸಿ ಮಾತನಾಡಿ, ದೇಶದಲ್ಲಿ ಸುಮಾರು ೩೦ ಲಕ್ಷಕ್ಕೂ ಅಧಿಕ ಹಳೆಯ ಪ್ರಕರಣಗಳು ವಿಚಾರಣೆಗೆ ಬಾಕಿಯಿವೆ. ಲೋಕ ಅದಾಲತ್ ಮೂಲಕ ಸಾರ್ವಜನಿಕರಿಗೆ ಹಾಗೂ ಅರ್ಜಿದಾರರ ಸಮಸ್ಯೆಗಳಿಗೆ ತ್ವರಿತ ಹಾಗೂ ಸುಲಭವಾಗಿ ಪರಿಹಾರ ಕಂಡುಕೊಳ್ಳಲು ಸಾಧ್ಯವಾಗಲಿದೆ ಎಂದರು.

ಸಂದರ್ಭದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶೆ ಕೋಮಲ ಆರ್.ಸಿ, ಸರ್ಕಾರಿ ಅಭಿಯೋಜಕಿ ಸೀತಾ, ನ್ಯಾಯವಾದಿಗಳ ಸಂಘದ ಅಧ್ಯಕ್ಷ ಸುನಿಲ್ ಕುಮಾರ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಅನಿಲ್ ಕುಮಾರ್ ನಿಟ್ಟೆ ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments