ಬೆಂಗಳೂರಿನಲ್ಲಿ ಶಂಕಿತ ಭಯೋತ್ಪಾದಕರ ಬಂಧನ ವಿಚಾರ : ಕರಾವಳಿ ಭಾಗದಲ್ಲಿ ಕಟ್ಟೆಚ್ಚರ
ಬೆಂಗಳೂರಲ್ಲಿ ಶಂಕಿತ ಭಯೋತ್ಪಾದಕರನ್ನು ಬಂಧಿಸಿದ ಬಳಿಕ ಕರಾವಳಿಯಲ್ಲಿ ವಿದ್ವಂಸಕ ಚಟುವಟಿಕೆ ಮೇಲೆ ಹದ್ದಿನ ಕಣ್ಣಿರಿಸಿರುವ ಪೊಲೀಸರು ಜನ ನಿಬಿಡ ಪ್ರದೇಶಗಳಲ್ಲಿ ಕಟ್ಟೆಚ್ಚರ ವಹಿಸಿದ್ದಾರೆ. ದೇವಸ್ಥಾನ, ಪ್ರವಾಸಿ ಕೇಂದ್ರ ಸೇರಿದಂತೆ ಆಯಾಕಟ್ಟಿನ ಸ್ಥಳಗಳಲ್ಲಿ ಕಳೆದ ನಾಲ್ಕು ದಿನಗಳಿಂದ ಶ್ವಾನ ದಳ, ಮಸೂರ ದರ್ಶಕದಿಂದ ತಪಾಸಣೆ ನಡೆಸಲರಾಂಭಿಸಿದ್ದಾರೆ.
ಈಗಾಗಲೇ ಉಡುಪಿ ಕೃಷ್ಣ ಮಠ, ಉಚ್ಚಿಲ ಶ್ರೀ ಮಹಾಲಕ್ಷ್ಮೀ ಕ್ಷೇತ್ರ, ಆಟಿ ಮಾರಿಪೂಜೆ ಸಂಭ್ರಮದಲ್ಲಿರುವ ಕಾಪುವಿನ ಮೂರೂ ಮಾರಿಗುಡಿ ಸುತ್ತ ತಪಾಸಣೆ ಚುರುಕುಗೊಳಿಸಿದ್ದಾರೆ. ತಪಾಸಣೆ ಕಾರ್ಯ ನಿರಂತರವಾಗಿ ಮುಂದುವರೆಯಲಿದೆ ಎಂದು ಪೆÇಲೀಸ್ ಮೂಲಗಳು ತಿಳಿಸಿವೆ.