ಕರಾವಳಿಯಲ್ಲಿ ಸಾಧಾರಣ ಮಳೆ
ದಕ್ಷಿಣ ಕನ್ನಡ ಮತ್ತು ಉಡುಪಿ ಭಾಗಗದ ಕೆಲವು ಕಡೆಗಳಲ್ಲಿ ಅಲಲ್ಲಿ ಸಾಧಾರಣ ಮಳೆಯಾಗಿದೆ. ಬೆಳಿಗ್ಗೆಯಿಂದಲೇ ಮೋಡ ಕವಿದ ವಾತಾವಣವಿದ್ದು, ಮಾಧ್ಯಹ್ನಾದ ಸಮಯದಲ್ಲಿ ಮಳೆ ಸುರಿದಿದೆ. ಕರಾವಳಿಯಲ್ಲಿ ಹಿಂಗಾರು ಕ್ಷೀಣಿಸುತ್ತಿದ್ದು, ಮುಂದಿನ ಎರಡು ದಿನಗಳ ಕಾಲ ಜಿಲ್ಲೆಯ ಅಲಲ್ಲಿ ಮೋಡ ಮತ್ತು ಸಾಧಾರಣ ಮಳೆಯ ಸಾಧ್ಯತೆ ಇದೆ. ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ ಸದ್ಯಕ್ಕೆ ಯಾವುದೇ ಅಲರ್ಟ್ ಘೋಷಿಸಿಲ್ಲ.