ಪ್ರಧಾನಿ ನರೇಂದ್ರ ಮೋದಿ : ಕಾರ್ಗಿಲ್‌ಗೆ ತೆರಳಿ ಯೋಧರೊಂದಿಗೆ ದೀಪಾವಳಿ ಆಚರಣೆ
ಕಾರ್ಗಿಲ್ : ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಕಾರ್ಗಿಲ್ ನಲ್ಲಿ ಭಾರತೀಯ ಯೋಧರೊಂದಿಗೆ ದೀಪಾವಳಿ ಆಚರಿಸಿದ್ದಾರೆ. ಪ್ರತಿ ವರ್ಷದಂತೆ ಈ ಬಾರಿಯೂ ಸೈನಿಕರೊಂದಿಗೆ ದೀಪಾವಳಿ ಆಚರಿಸಲು ಪ್ರಧಾನಿ ನರೇಂದ್ರ ಮೋದಿ ಕಾರ್ಗಿಲ್‌ಗೆ ಆಗಮಿಸಿದ್ದಾರೆ. ಇನ್ನು ಮೋದಿಯರವರು 2014ರಲ್ಲಿ ಅಧಿಕಾರ ವಹಿಸಿಕೊಂಡಾಗಿನಿಂದ ಉತ್ತರಾಖಂಡ, ಹಿಮಾಚಲ ಪ್ರದೇಶ, ರಾಜಸ್ಥಾನ, ಪಂಜಾಬ್ ಮತ್ತು ಜಮ್ಮು ಮತ್ತು ಕಾಶ್ಮೀರದ ಕೇಂದ್ರಾಡಳಿತ ಪ್ರದೇಶಗಳಂತಹ ರಾಜ್ಯಗಳಲ್ಲಿ ದೀಪಾವಳಿಯಂದು ಸೈನಿಕರೊಂದಿಗೆ ಸಮಯ ಕಳೆಯುತ್ತಾರೆ.