ಕಾರ್ಕಳ : ಕಾಂಗ್ರೆಸ್ ಮುಖಂಡರು ಬಿಜೆಪಿಗೆ ಸೇರ್ಪಡೆ
ಕಾರ್ಕಳ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ದಿವಂಗತ ನರಸಿಂಹ ನಾಯಕ್ ಅವರ ಪುತ್ರ ಕನ್ಯಾನ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಲಕ್ಷ್ಮಿ ನಾರಾಯಣ ನಾಯಕ್ ಅವರು ಸುನಿಲ್ ಕುಮಾರ್ ರವರ ವಿಕಾಸ ಕಚೇರಿಯಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು.ಅವರ ಜೊತೆ ಹಲವರು ಕಾಂಗ್ರೆಸಿನ ಮುಖಂಡರು ಬಿಜೆಪಿ ಪಕ್ಷಕ್ಕೆ ಸೇರ್ಪಡಿಕೊಂಡರು. ಸುನಿಲ್ ಕುಮಾರ್ ಅವರು ಬಿಜೆಪಿ ಪಕ್ಷದ ಧ್ವಜ ನೀಡಿ ಪಕ್ಷಕ್ಕೆ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಪ್ರತಾಪ್ ಸಿಂಹ ನಾಯಕ್, ಬಿಜೆಪಿ ಕ್ಷೇತ್ರ ಅಧ್ಯಕ್ಷ ಮಹಾವೀರ ಹೆಗಡೆ, ಗುರು ದಾಸ Sheಟಿoಥಿ, ದಿನೇಶ್ ಪೈ, ನವೀನ್ ನಾಯಕ್ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.