ಕಾರ್ಕಳ: ಮಹಿಳೆಯರಿಗೆ ಮೀಸಲಾತಿ ನೀಡಿದ ಮೊದಲ ರಾಜ್ಯ ಕರ್ನಾಟಕ: ಡಾ. ಎಂ. ವೀರಪ್ಪ ಮೊಯಿಲಿ
ಕಾರ್ಕಳ: ಮಹಿಳೆಯರಿಗೆ ಮೀಸಲಾತಿ ನೀಡುವಲ್ಲಿ ಕರ್ನಾಟಕ ಮೊದಲ ರಾಜ್ಯವಾಗಿದೆ ಎಂದು ಮಾಜಿ ಮುಖ್ಯ ಮಂತ್ರಿ ಡಾ. ಎಂ. ವೀರಪ್ಪ ಮೊಯಿಲಿ ಹೇಳಿದರು.
ಅವರು ಕಾರ್ಕಳ ಮತ್ತು ಹೆಬ್ರಿ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಕಾರ್ಕಳ ಬಾಹುಬಲಿ ಪ್ರವಚನ ಮಂದಿರದಲ್ಲಿ ನಡೆದ ಕಾಂಗ್ರೆಸ್ ಬೃಹತ್ ಸಮಾವೇಶದಲ್ಲಿ ಮಾತನಾಡಿದರು. 1993 ರಲ್ಲಿಯೆ ಮಹಿಳೆಯರಿಗೆ ಮೀಸಲಾತಿ ಜಿಲ್ಲಾ ಹಾಗೂ ತಾಲೂಕು ಪಂಚಾಯತ್ ನಲ್ಲಿ 50% ಮೀಸಲಾತಿ ಯನ್ನು ಕಾಂಗ್ರೆಸ್ ಪಕ್ಷ ಜಾರಿಗೆ ತಂದಿತ್ತು. ಅಂದಿನ ಪಂಚಾಯತ್ ಚುನಾವಣೆಯಲ್ಲಿ 52% ದಷ್ಟು ಮಹಿಳೆಯರು ಚುನಾವಣೆಯಲ್ಲಿ ಆಯ್ಕೆಯಾಗಿದ್ದರು.
ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಾತನಾಡಿ, ಸೋಲಿಸುವವರ ಮನಪರಿವರ್ತಿಸಿ ಅವರನ್ನು ಪಕ್ಷ ಕೊಟ್ಟ ಜವಾಬ್ದಾರಿಯನ್ನು ನಿರ್ವಹಿಸಿ, ಅಧಿಕಾರ ಶಾಶ್ವತವಲ್ಲ ಅದರೆ, ಉಸ್ತುವಾರಿ ಅವಧಿಯಲ್ಲಿ ನಿರ್ವಹಿಸಿದ ಕಾರ್ಯಗಳು ಶಾಶ್ವತ ವಾಗಬೇಕು ಎಂದರು.
ಕಾಂಗ್ರೆಸ್ ಮುಖಂಡ ಉದಯ ಶೆಟ್ಟಿ ಮುನಿಯಾಲು ಮಾತನಾಡಿ ಕಾಂಗ್ರೆಸ್ ಪಕ್ಷದ ದುರಾಡಳಿತವನ್ನು ಕಡೆಗಣಿಸಿ ಜಿ.ಪಂ ಹಾಗೂ ತಾ.ಪಂ ಚುನಾವಣೆಗಳನ್ನು ಎದುರಿಸಲು ಸಿದ್ದರಾಗಬೇಕು ಎಂದು ಕಾರ್ಯಕರ್ತರಿಗೆ ಕರೆನೀಡಿದರು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಮತಾಗಟಿ,್ಟ ಕಾಂಗ್ರೇಸ್ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು , ಸುಧೀರ್ ಮರೋಳಿ, ರಾಜ್ಯ ಕೃಷಿ ಘಟಕ ಕಾರ್ಯದರ್ಶಿ ಉದಯ ವಿ. ಶೆಟ್ಟಿ ಕಾರ್ಯದರ್ಶಿ, ಕೆಪಿಸಿಸಿ ಸದಸ್ಯ ನೀರೆ ಕೃಷ್ಣ ಶೆಟ್ಟಿ, ಸುರೇಂದ್ರ ಶೆಟ್ಟಿ, ಹೆಬ್ರಿ ಬ್ಲಾಕ್ ಮಾಜಿ ಅಧ್ಯಕ್ಷ ಮಂಜುನಾಥ ಪೂಜಾರಿ, ಜಿಲ್ಲಾ ವಕ್ತಾರರ ಬಿಪಿನಚಂದ್ರ ಪಾಲ್ ಮೊದಲಾದವರು ಉಪಸ್ಥಿತರಿದ್ದರು.