ನೀಟ್ ಪರೀಕ್ಷೆಯಲ್ಲಿ ಕ್ರಿಯೇಟಿವ್ ಪಿ ಯು ಕಾಲೇಜಿನ ವಿದ್ಯಾರ್ಥಿಗಳ ಸಾಧನೆ

ರಾಷ್ಟ್ರೀಯ ಪರೀಕ್ಷಾ ಮಂಡಳಿ ನಡೆಸಿದ ನೀಟ್ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಪಿ ಯು ಕಾಲೇಜಿನ ವಿದ್ಯಾರ್ಥಿಗಳು ಅಮೋಘ ಸಾಧನೆ ಮಾಡಿದ್ದಾರೆ. ಕಾಲೇಜಿನ ವಿದ್ಯಾರ್ಥಿಗಳಾದ ರಾಘವೇಂದ್ರ ತಾಳಿಕೋಟಿ 646, ಸಾತ್ವಿಕ ಶ್ರೀಕಾಂತ್ ಹೆಗಡೆ 641, ಸೋಹನ್ ಎಸ್ ನೀಲಕರಿ 598, ಸುದೀಪ್ ಅಸಂಗಿಹಾಲ್ 552, ಹಾಸನದ ವಿಕಾಸ್ ಗೌಡ ಎಂ 608 ಅಂಕಗಳನ್ನು ಗಳಿಸಿದ್ದಾರೆ.

ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ಅತ್ಯಂತ ಅನುಭವಿ ಉಪನ್ಯಾಸಕರುಗಳೇ ಸೇರಿ ನಿರ್ಮಿಸಿರುವ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ನಿರಂತರವಾಗಿ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉತ್ತಮ ತರಬೇತಿ ನಡೆಯುತ್ತಿದೆ.

ಕಾಲೇಜಿನ ಪ್ರಥಮ ವರ್ಷದ ನೀಟ್ ಫಲಿತಾಂಶದಲ್ಲಿಯೇ, ಪರೀಕ್ಷೆಗೆ ಕುಳಿತ 88 ವಿದ್ಯಾರ್ಥಿಗಳಲ್ಲಿ 76 ವಿದ್ಯಾರ್ಥಿಗಳು ಅರ್ಹತೆ ಗಳಿಸಿದ್ದು, 23 ವಿದ್ಯಾರ್ಥಿಗಳು 4೦೦ಕ್ಕೂ ಹೆಚ್ಚು ಅಂಕ ಗಳಿಸಿದ್ದಾರೆ.

ಕ್ರಿಯೇಟಿವ್ ಸಂಸ್ಥೆಯ ವಿದ್ಯಾರ್ಥಿಗಳು ಈ ಮೊದಲು ಪ್ರಕಟಗೊಂಡ JEE, CET, RIE, NDA, NATA, C.A ಮತ್ತು C.S.E.E.T ಪರೀಕ್ಷೆಗಳಲ್ಲಿ ಅತ್ಯುನ್ನತ ಸಾಧನೆ ದಾಖಲಿಸಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಆಡಳಿತ ಮಂಡಳಿ, ನೀಟ್ ಸಂಯೋಜಕರಾದ ಲೋಹಿತ್ ಎಸ್ ಕೆ ಮತ್ತು ಉಪನ್ಯಾಸಕ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

Related Posts

Leave a Reply

Your email address will not be published.