ಕಾರ್ಕಳ: ಬಸ್ಸು – ಬೊಲೆರೋ ವಾಹನ ಡಿಕ್ಕಿ, ಓರ್ವ ಮೃತ್ಯು, ಇಬ್ಬರಿಗೆ ಗಾಯ
ಬೆಳ್ಮಣ್: ಬಸ್ಸು ಹಾಗೂ ಬೊಲೆರೋ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಒರ್ವ ಸ್ಥಳದಲ್ಲೇ ಮೃಪಟ್ಟು ಇಬ್ಬರ ಗಂಭೀರ ಗಾಯಗೊಂಡ ಘಟನೆ ಕಾರ್ಕಳದ ಮಂಜರಪಲ್ಕೆ ಎಂಬಲ್ಲಿ ನಡೆದಿದೆ.
ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದ ಮಂಜರ್ಪಲ್ಕೆ ಎಂಬಲ್ಲಿ ನಂದಳಿಕೆ ಕಡೆಯಿಂದ ಬರುತ್ತಿದ್ದ ಬೋಲೆರೊ ಕಾರು ಕಾರ್ಕಳ ಕಡೆಯಿಂದ ಬರುತ್ತಿದ್ದ ಮುಂಬೈ ಬಸ್ಸಿಗೆ ಡಿಕ್ಕಿ ಹೊಡೆದ ಪರಿಣಾಮ ಈ ಘಟನೆ ಸಂಭವಿಸಿದೆ. ಚಿಕ್ಕಮಗಳೂರು ಜಿಲ್ಲೆಯ ಜಯಪುರ ನಿವಾಸಿ ಶಿವಪ್ಪ 48 ಸ್ಥಳದಲ್ಲೇ ಮೃತಪಟ್ಟರೆ, ಮಂಜು 45 , ಸುಜಯ 28 ರವರ ಸ್ಥಿತಿ ಗಂಭೀರ ವಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್ಸಿನಲ್ಲಿದ್ದ 12 ಮಂದಿ ಪ್ರಯಾಣಿಕರು ಕಾರ್ಕಳ ರೋಟರಿ ಆಸ್ಪತ್ರೆಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾರ್ಕಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.