ಕಾರ್ಕಳ : ಚಾಣಕ್ಯ ಕದೀಮರಿಬ್ಬರ ಸೆರೆ

ಒಡವೆ ಕಳ್ಳತನ ಸಹಿತ ವಾಹನಗಳ ಕಳ್ಳತನ ನಡೆಸಿ ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸುತ್ತಿದ್ದ ಕದೀಮ ಕಳ್ಳರಿಬ್ಬರನ್ನು ಕಾರ್ಕಳ ಪೊಲೀಸ್ ಉಪಾಧೀಕ್ಷರ ಹಾಗೂ ವೃತ ನಿರೀಕ್ಷಕರ ತಂಡ ಬಂಧಿಸಿದೆ.

ಬಂಧಿತರ ಮೇಲೆ ರಾಜ್ಯಾದ್ಯಂತ ಬಹಳಷ್ಟು ಠಾಣೆಗಳಲ್ಲಿ ಪ್ರಕರಣ ದಾಖಲಾಗಿದ್ದು, ಮೂಲತಃ ಬಜಪೆ ನಿವಾಸಿ ಇದೀಗ ಮೂಳೂರುಎಸ್.ಎಸ್. ರಸ್ತೆಯ ಶ್ರೀ ಸಾಯಿ ಅಪಾರ್ಟ್ಮೆಂಟ್ ನಲ್ಲಿ ವಾಸವಿದ್ದ ವಾಜೀದ್ ಜೆ.(25) ಹಾಗೂ ಉಡುಪಿ ಕಡಿಯಾಳಿ ಆಚಾರ್ಯ ರಸ್ತೆಯ ಬಾಡಿಗೆ ಮನೆ ನಿವಾಸಿ ಶಹನಾಜ್ (32) ಎಂದು ಗುರುತಿಸಲಾಗಿದೆ. ಸುತ್ತಲ ಬಹಳಷ್ಟು ಠಾಣಾ ವ್ಯಾಪ್ತಿಗಳಲ್ಲಿ ಕಳ್ಳತನ ನಡೆಸಿ ಪೊಲೀಸರ ಕೈಗೆ ಸಿಗದೆ ಪರಾರಿಯಾಗುತ್ತಿದ್ದು ಇದೀಗ ಕಾಪು ಠಾಣಾ ವ್ಯಾಪ್ತಿಯಲ್ಲಿ ಸಿಕ್ಕಿ ಹಾಕಿಕೊಳ್ಳುವ ಮೂಲಕ ಪೊಲೀಸ್ ಇಲಾಖೆ ಸಹಿತ ಸಾರ್ವಜನಿಕರು ನಿಟ್ಟುಸಿರು ಬಿಡುವಂತ್ತಾಗಿದೆ.
