ಕಾರ್ಕಳ : ಅಣ್ಣನ ತಿಥಿಗೆ ಪೂರ್ವ ಸಿದ್ಧತೆ ಮಾಡುತ್ತಿದ್ದ ತಂಗಿ ವಿದ್ಯುತ್ ಅಘಾತಕ್ಕೊಳಗಾಗಿ ದಾರುಣ ಸಾವು

ಕಾರ್ಕಳ : ಅಣ್ಣನ ತಿಥಿಗೆ ಪೂರ್ವ ಸಿದ್ಧತೆ ಮಾಡುತ್ತಿದ್ದ ತಂಗಿ ವಿದ್ಯುತ್ ಅಘಾತಕ್ಕೊಳಗಾಗಿ ದಾರುಣ ರೀತಿಯಲ್ಲಿ ಮೃತ ಪಟ್ಟ ಘಟನೆ ನಿಟ್ಟೆ ಪರಪ್ಪಾಡಿ ಎಂಬಲ್ಲಿ ಸಂಭವಿಸಿದೆ.

ಗುರುವಾರ ರಾತ್ರಿ ಈ ಘಟನೆಯಲ್ಲಿ ಲಲಿತಾ ಬೋಂಡ್ರ ಮೃತಪಟ್ಟ ಮಹಿಳೆ.

ನಿಟ್ಟೆ ಪರಪ್ಪಾಡಿಯ ರಾಘು ಬೋಂಡ್ರ ಎಂಬವರು ಕೆಲ ದಿನಳ ಹಿಂದೆ ಮೃತಪಟ್ಟಿದ್ದರು. ಅಣ್ಣನ‌ ತಿಥಿಯ ಪೂರ್ವ ಸಿದ್ಧತೆಗಾಗಿ ಬಂದಿದ್ದ ತಂಗಿ ಲಲಿತಾ ಬೋಂಡ್ರ ಅವರು ಗುರುವಾರ ರಾತ್ರಿ ಅಡುಗೆ ಪಾತ್ರೆಗಳನ್ನು ತೊಳೆಯುತ್ತಿದ್ದರು. ಅದೇ ಸಂದರ್ಭದಲ್ಲಿ ಮನೆ ಹೊರಾಂಗಣದಲ್ಲಿ ಅಳವಡಿಸಲಾಗಿದ್ದ ಶಾಮಿಯಾನದ ಕಬ್ಬಿಣದ ಕಂಬವನ್ನು ಹಿಡಿಯುತ್ತಿದ್ದಂತೆ ಅವರು ವಿದ್ಯುತ್ ಅಘಾತಕ್ಕೊಳಗಾಗಿ ಘಟನಾ ಸ್ಥಳದಲ್ಲಿ ಕುಸಿದು ಬಿದ್ದು ದಾರುಣ ಅಂತ್ಯ ಕಂಡಿದ್ದಾರೆ.

ಶಾಮೀಯನ ಅಳವಡಿಸಿದಾಗ ಅದರ ಕಬ್ಬಣದ ಕಂಬಕ್ಕೆ‌ ಟ್ಯೂಬ್ ಲೈಟ್ ಅಳವಡಿಸಲಾಗಿ ಅದರ ಮೂಲ ವಿದ್ಯುತ್ ಸೋರಿಕೆಯಾಗಿ ಈ ಘಟನೆ ಸಂಭವಿಸಿಎಬಹುದೆಂಬ ಮಾಹಿತಿ ತಿಳಿದು ಬಂದಿದೆ.

add - LED Zone

Related Posts

Leave a Reply

Your email address will not be published.