ಮುಂದಿನ ಚುನಾವಣೆಗೆ ಕಾರ್ಕಳದಿಂದಲೇ ಸ್ಪರ್ಧೆ, ಸಚಿವ ವಿ ಸುನಿಲ್ ಕುಮಾರ್ ಹೇಳಿಕೆ

ಕಾರ್ಕಳ: ನಾನು ಮುಂದಿನ ಚುನಾವಣೆಗೆ ಕಾರ್ಕಳದಿಂದಲೆ ಸ್ಪರ್ಧಿಸುತಿದ್ದೆನೆ. ಕಾರ್ಕಳ ವಿಧಾನಸಭಾ ಕ್ಷೇತ್ರ ನನ್ನ ರಾಜಕೀಯ ದೀಕ್ಷೆ ನೀಡಿದ ಕ್ಷೇತ್ರ. ಬೇರೆ ಕ್ಷೇತ್ರಕ್ಕೆ ಓಡಿಹೋಗಲ್ಲ ಎಂದು ಸಚಿವ ವಿ ಸುನೀಲ್ ಕುಮಾರ್ ಹೇಳಿದರು.
ಅವರು ಕಾರ್ಕಳ ಬಿಜೆಪಿ ಕಾರ್ಕಳ ವತಿಯಿಂದ ಮಂಜುನಾಥ್ ಪೈ ಸಭಾ ಭವನದಲ್ಲಿ ನಡೆದ ಬೂತ್ ಮಟ್ಟದ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.ಬಿಜೆಪಿಯ ಸರಕಾರದ ಸಾಧನೆಯನ್ನು ಬೂತ್ ಮಟ್ಟದ ಕಾರ್ಯಕರ್ತರು ಮನೆಮನೆಗೆ ತಲುಪಿಸುವಲ್ಲಿ ವಿಫಲರಾಗಿದ್ದಾರೆ ಅದಕ್ಕಾಗಿ ಬೂತ್ ಮಟ್ಟದ ಕಾರ್ಯಕರ್ತರ ಸಭೆಯನ್ನು ಹಮ್ಮಿಕೊಳ್ಳಲಾಗಿದೆ , ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿವೆ, ಲವ್ ಜಿಹಾದ್ ವಿರುದ್ದ ಕಾನೂನು , ಗೋಹತ್ಯೆ ನಿಷೇಧ, ಟಿಪ್ಪು ಜಯಂತಿ ಆಚರಣೆ ನಿಲ್ಲಿಸಿದ್ದು, ಹಿಜಾಬ್ ವಿರುದ್ಧ ಗಟ್ಟಿ ದ್ವನಿ ಯಾಗಿ ಸಮವಸ್ತ್ರ ಧರಿಸಲು ಕಾನೂನು ಜಾರಿಗೊಳಿಸಿದ್ದು ಇದೇ ಬಿಜೆಪಿ ಸರಕಾರ ಎಂದರು.

ಸಭೆಯಲ್ಲಿ ಬಿಜೆಪಿ ಕ್ಷೇತ್ರಾದ್ಯಕ್ಷ ಮಹಾವೀರ ಹೆಗ್ಡೆ, ಮಾತನಾಡಿ ಚುನಾವಣೆ ಗೆ ದಿಕ್ಕನ್ನು ತೋರಿಸುವ ಸಲುವಾಗಿ ಕಾರ್ಯಕರ್ತರಿಗೆ ಶಕ್ತಿ ತುಂಬುವ ಕಾರ್ಯವಾಗುತ್ತಿದೆ. ಕಾರ್ಕಳ ವಿಧಾನ ಸಭಾ ಕ್ಷೇತ್ರ ರಾಜ್ಯದಲ್ಲಿ ಮಾದರಿಯಾದ ಕ್ಷೇತ್ರವಾಗಿದೆ ಎಂದರು.
ಈ ಸಂದರ್ಭದಲ್ಲಿ ಬಿಜೆಪಿ ಮುಖಂಡ ರವೀಂದ್ರ ಶೆಟ್ಟಿ ಬಜಗೋಳಿ, ಸಭೆಯಲ್ಲಿ, ಬಿಜೆಪಿ ಮುಖಂಡರಾದ ಬೋಳ ಪ್ರಭಾಕರ್ ಕಾಮತ್ ಎಂ.ಕೆ ವಿಜಯಕುಮಾರ್, , ಹೆಬ್ರಿ ಶಕ್ತಿ ಕೇಂದ್ರ ದ ಅಧ್ಯಕ್ಷ ರಮೇಶ್ ಶಿವಪುರ, ಸಾಣೂರು ಶಕ್ತಿ ಕೆಂದ್ರದ ಕರುಣಾಕರ್ ಕೋಟ್ಯಾನ್, ಪುರುಷೋತ್ತಮ್ ಮುಲ್ಲಡ್ಕ ,ರವೀಂದ್ರ ಮೂಳೂರು ಉಪಸ್ಥಿತರಿದ್ದರು.
