ಕಾರ್ಕಳದ ಉಮಿಕಲ್ ಬೆಟ್ಟದ ಮೇಲೆ ಪರಶುರಾಮ ಥೀಮ್ ಪಾರ್ಕ್

ಕಾರ್ಕಳ: ಪರಶುರಾಮ ಸೃಷ್ಟಿಯ ಮೂಲಕ ಸಾರ್ಥಕತೆ ಇದೆ. ಇಲ್ಲಿ ಭಾಗವಹಿಸಿದ ನಾವು ಭಾಗ್ಯವಂತರು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದರು. ಅವರು ಕಾರ್ಕಳ ತಾಲೂಕಿನ ಬೈಲೂರಿನಲ್ಲಿ ಉಮಿಕಲ್ ಬೆಟ್ಟದ ಮೇಲೆ 33 ಅಡಿ ಎತ್ತರದ ಕಂಚಿನ ಪ್ರತಿಮೆಯನ್ನು ಅನಾವರಣ ಗೊಳಿಸಿಮಾತನಾಡಿದರು.ಪರಶುರಾಮನ ಪುತ್ಥಳಿ ನಿರ್ಮಾಣ ಮೂಲಕ ಪುರಾಣಕ್ಕೆ ಹೊಸದೊಂದು ಕುರುಹು ಸಿಕ್ಕಿದೆ ಅಮೂಲಕ ಐತಿಹಾಸಿಕ ದಿನವಾಗಿ ಮೂಡಿಬಂದಿದೆ ಎಂದು ಸಿ ಎಂ ಬೊಮ್ಮಾಯಿ ಬಣ್ಣಿಸಿದರು . ಸಿಕ್ಕ ಅವಕಾಶವನ್ನು ಬಳಸಿಕೊಂಡು ಸಾಧಿಸುವುದೆ ಸಾಧಕನ ಕೆಲಸ ಎಂದು ಸಚಿವ ಸುನೀಲ್ ಕುಮಾರ್ ಅವರನ್ನು ಪರಶುರಾಮನ ಪ್ರತಿಮೆಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಪರಶುರಾಮ ಥೀಮ್ ಪಾರ್ಕ್ ನಿರ್ಮಾಣದಿಂದ ಪ್ರವಾಸೋದ್ಯಮಕ್ಕೆ ಹೆಚ್ಚಿನ ಒತ್ತು ಸಿಗಲಿದೆ ಅಮೂಲಕ ಸ್ಥಳಿಯ ವಾಗಿ ಅರ್ಥಿಕ ಬಲವರ್ಧನೆಗೆ ಸಾಕ್ಷಿಯಾಗಲಿದೆ ಎಂದು ಹೇಳಿದರು ಕರಾವಳಿ ಭಾಗದಲ್ಲಿ ಪ್ರವಾಸೋದ್ಯಮ ಕ್ಕೆ ವಿಫುಲ ಅವಕಾಶಗಳಿವೆ . ಅದಕ್ಕಾಗಿ ಹಲವಾರು ಯೋಜನೆಗಳನ್ನು ರೂಪಿಸಲಾಗುತ್ತಿದೆ . ಯಾತ್ರಿಕರಿಗೆ ಅನುಕೂಲ ಕಲ್ಪಿಸಲು ದೇವಾಲಯಗಳ ಮೂಲಕ ಪ್ರವಾಸೋದ್ಯಮ, ಕರಾವಳಿಯ ಪ್ರವಾಸೋದ್ಯಮ, ಸಾಂಸ್ಕೃತಿಕ ಪ್ರವಾಸೋದ್ಯಮಕ್ಕೆ ಮಾಸ್ಟರ್ ಪ್ಲಾನ್ ಮಾಡುವ ಮೂಲಕ ಆರ್ಥಿಕವಾಗಿ ಬಲಪಡಿಸಲು ಸರಕಾರ ಶಕ್ತವಾಗಿದೆ ಎಂದರು

ಸಚಿವ ಇಂಧನ ಹಾಗೂ ಕನ್ನಡ ಸಂಸ್ಕೃತಿ ಸಚಿವ ಸುನೀಲ್ ಕುಮಾರ್ ಪ್ರಸ್ತಾವಿಕ ಮಾತನಾಡಿದರು. ಕೇಂದ್ರ ಸಚಿವೆ ಶೋಭ ಕರಂದ್ಲಾಜೆ, ಸಚಿವ ಇಂಧನ ಹಾಗೂ ಕನ್ನಡ ಸಂಸ್ಕೃತಿ ಸಚಿವ ಸುನೀಲ್ ಕುಮಾರ್ , ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಅಂಗಾರ, ಗೇರು ನಿಗಮ ಅದ್ಯಕ್ಷ ಮಣಿರಾಜ್ ಶೆಟ್ಟಿ , ಎಂಎಲ್‍ಸಿ ರವಿ ಕುಮಾರ್, ಉದಯ್ ಕುಮಾರ್ ಶೆಟ್ಟಿ, ಶಾಸಕ ಲಾಲಜಿ ಮೆಂಡನ್ ,ಕಾಂತಾರ ರಿಷಬ್ ಶೆಟ್ಟಿ , ಶಾಸಕರಾದ ರಘುಪತಿ ಭಟ್, ಕರಾವಳಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಮಟ್ಟಾರು ರತ್ನಾಕರ್ ಹೆಗ್ಡೆ , ಕರಾವಳಿ ಪ್ರಾಧಿಕಾರದ ಅಧ್ಯಕ್ಷ ಚೆನ್ನಪ್ಪ ಶೆಟ್ಟಿ , ಜಿಪಂ ಕಾರ್ಯನಿರ್ವಾಹಕ ಅಧಿಕಾರಿ ಪ್ರಸನ್ನ, ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ , ಎಸ್ ಪಿ ಅಕ್ಷಯ್ ಹಾಕೆ ಮಚಿಂದ್ರ ಉಪಸ್ಥಿತರಿದ್ದರು. ಇದೆ ಸಂದರ್ಭದಲ್ಲಿ ಮುಖ್ಯಮಂತ್ರಿಗಳಿಗೆ ಜಿಲ್ಲಾಡಳಿತ ವತಿಯಿಂದ ಸನ್ಮಾನಿಸಲಾಯಿತು. ಪ್ರಾಂಶುಪಾಲ ಮಂಜುನಾಥ್ ಕೋಟ್ಯಾನ್ ಕಾರ್ಯಕ್ರಮ ನಿರೂಪಿಸಿದರು. ಜಿಲ್ಲಾಧಿಕಾರಿ ಕೂರ್ಮಾರಾವ್ ದನ್ಯವಾದವಿತ್ತರು.
