ಕಾರ್ಕಳ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಆತ್ಮಹತ್ಯೆ

ಕಾರ್ಕಳ ಗ್ರಾಮಾಂತರ ಠಾಣೆಯ ಪೊಲೀಸ್ ಹೆಡ್ ಕಾನ್ ಸ್ಟೇಬಲ್ ತನ್ನ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ರಾತ್ರಿ ಮಿಯ್ಯಾರು ಎಂಬಲ್ಲಿ ನಡೆದಿದಿದೆ.
ಮೃತರನ್ನು ಕಾರ್ಕಳ ಗ್ರಾಮಾಂತರ ಠಾಣೆಯ ಪೊಲೀಸ್ ಹೆಡ್ ಕಾನ್ ಸ್ಟೇಬಲ್, ಮಿಯ್ಯಾರು ಗ್ರಾಮದ ಕಾಜರಬೈಲು ನಿವಾಸಿ ಪ್ರಶಾಂತ್ ಮಿಯ್ಯಾರು (49) ಎಂದು ಗುರುತಿಸಲಾಗಿದೆ.
ರಜೆಯಲ್ಲಿದ್ದ ಇವರು ಕಾರ್ಕಳದ ಮಿಯ್ಯಾರಿನ ತನ್ನ ಮನೆಯ ಹಿಂಭಾಗದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾಗಿದೆ. ಈ ಘಟನೆ ರವಿವಾರ ಬೆಳಗ್ಗೆ ಘಟನೆ ಬೆಳಕಿಗೆ ಬಂದಿದೆ.ಸ್ಥಳಕ್ಕೆ ಆಗಮಿಸಿರುವ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.