ಕಾರ್ಕಳ :ಪ್ರಮುಖ ರಸ್ತೆಗಳು ಹೊಂಡ-ಗುಂಡಿ , ಪುರಸಭೆ ನಿರ್ಲಕ್ಷ್ಯದ ವಿರುದ್ಧ ಪ್ರತಿಭಟನೆ

ಕಾರ್ಕಳ: ನಗರದ ಮಂಗಳೂರು ರಸ್ತೆ ಅಭಿವೃದ್ಧಿಯ ಕುರಿತು ಕಾರ್ಕಳ ಪುರಸಭೆ ನಿರ್ಲಕ್ಷಿಸಿದ ಪರಿಣಾಮವಾಗಿ ರಸ್ತೆ ಪೂರ್ತಿ ಹೊಂಡ ಗುಂಡಿಗಳು ತೆರದುಕೊಂಡು ವಾಹನ ಸಂಚಾರಕ್ಕೆ ಅಯೋಗ್ಯವೆನಿಸಿದೆ. ಇದರ ಕುರಿತು ಆಡಳಿತಕ್ಕೆ ಎಚ್ಚರಿಕೆಯ ಪ್ರಯತ್ನಿಸಿದರೆ ಆಡಳಿರೂಢ ಪಕ್ಷವು ನಮ್ಮ ಹೋರಾಟವನ್ನು ಹತ್ತಿಕ್ಕುವ ಪ್ರಯತ್ನದೋಂದಿಗೆ ರಾಜಕೀಯಗೊಳಿಸುತ್ತಿದೆ ಎಂದು ಪುರಸಭಾ ಸದಸ್ಯ ಶುಭದರಾವ್ ವಾಗ್ದಾಳಿ ನಡೆಸಿದರು.

ಭವಾನಿ ಮಿಲ್‍ನಿಂದ ಮೂರು ಮಾರ್ಗದ ತನಕ ವರೆಗಿನ ಮಂಗಳೂರು ರಸ್ತೆ ದುರಸ್ಥಿಗೆ ಆಗ್ರಹಿಸಿ ಸಾರ್ವಜನಿಕರು ಪ್ರತಿಭಟನೆ ನಡೆಸಿದರು. ಮಂಗಳೂರು ರಸ್ತೆಯು ಪುರಸಭೆಯ ದಿವ್ಯ ನಿರ್ಲಕ್ಷ್ಯದಿಂದಾಗಿ ಮಳೆಗಾಲದಲ್ಲಿ ಸಂಪೂರ್ಣ ಕೆಸರುಮಯವಾಗಿ ಚಿನ್ನದ ರಸ್ತೆಯಂತೆ ಹೊಳೆಯುತ್ತಿತ್ತು. ನಾಗರಿಕರ ಹೋರಾಟ ಮುನ್ಸೂಚನೆ ಅರಿತು ಕೊಂಡ ಪುರಸಭಾ ಆಡಳಿತ ವರ್ಗವು ಆಹೋರಾತ್ರಿ ಎನ್ನದೇ ದಿನಗಳ ಹಿಂದೆಯಷ್ಟೇ ಆ ರಸ್ತೆಗೆ ಜಲ್ಲಿಪುಡಿ ತಂದು ಹಾಕಿರುವ ಮೂಲಕ ಚಿನ್ನದ ರಸ್ತೆಗೆ ಬೆಳ್ಳಿಯ ಲೇಪನ ಹಾಕಿದಂತಾಗಿದೆ. ಮುಂದಿನ ಎರಡು ದಿನಗಳಲ್ಲಿ ಸುರಿಯುವ ಮಳೆಗೆ ಆ ಜಲ್ಲಿಪುಡಿ ರಸ್ತೆ ತೊಳೆದು ಮತ್ತೇ ಮೊದಲಿನಂತೆ ಹೊಂಡ ಕಾಣಸಿಗಲಿದೆ. ಈ ನಡುವೆ ರಸ್ತೆಯಲ್ಲಿ ನಿಂತಿರುವ ಮಳೆ ನೀರು ಹಾಗೂ ಜಲ್ಲಿಪುಡಿ ಮಿಶ್ರಣದ ಕೆಸರು ನೀರು ನಾಗರಿಕರಿಗೆ ಅಭಿಷೇಕವಾಗಲಿದೆ. ಇದು ಪುರಸಭೆ ಆಡಳಿತ ವೈಖರಿಗೆ ಹಿಡಿದ ಕನ್ನಡಿ ಎಂದು ಲೇವಡಿ ಮಾಡಿದರು.

ಕಾರ್ಕಳ ಉತ್ಸವದಲ್ಲಿ ಹೆಲಿಪ್ಯಾಡ್ ನೀರು ಸಿಂಪಡಿಸುವಿಕೆಗೆ ರೂ. 8 ಲಕ್ಷ ಕಾರ್ಕಳ ಉತ್ಸವ ಸಂದರ್ಭದಲ್ಲಿ ತಾಲೂಕು ಕ್ರೀಡಾಂಗಣದಲ್ಲಿ ಹೆಲಿಕಾಪ್ಟರ್ ಹಾರಟ ನಡೆದಿದ್ದು, ಅದೇ ಸಂದರ್ಭದಲ್ಲಿ ಅಲ್ಲಿ ನೀರು ಸಿಂಪಡೆಗೆ ರೂ. 8.9 ಲಕ್ಷ ಮೊತ್ತವನ್ನು ಪುರಸಭೆ ಭರಿಸಿದೆ. ಆ ಮೊತ್ತದಲ್ಲಿ ಮಂಗಳೂರು ರಸ್ತೆಗೆ ಡಾಂಬರೀಕರಣಕ್ಕೆ ವಿನಿಯೋಗಿಸುವ ಚಿಂತನೆಯನ್ನು ಪುರಸಭೆ ನಡೆಸುತ್ತಿದ್ದರೆ ಇಂತಹ ಸಮಸ್ಸೆ ಎದುರಾಗುತ್ತಿರಲಿಲ್ಲ ಪುರಸಭಾ ಸದಸ್ಯ ಶುಭದರಾವ್ ಹೇಳಿದರು. ಪುರಸಭಾ ಕೌನ್ಸಿಲರ್‍ಗಳಾದ ಶುಭದರಾವ್, ವಿನ್ನಿಬೋಲ್ಡ್ ಮೆಂಡೋನ್ಸಾ, ಸೋಮನಾಥ, ಪುರಸಭಾ ಮಾಜಿ ಅಧ್ಯಕ್ಷರಾದ ಸೀತಾರಾಮ, ಪ್ರತಿಮಾ ರಾಣೆ, ಉದ್ಯಮಿಗಳಾದ ರಾಜೇಂದ್ರ, ಯುವ ಕಾಂಗ್ರೆಸ್ ಮುಖಂಡ ಯೋಗೀಶ್ ಇನ್ನಾ ಮೊದಲಾದವರು ಉಪಸ್ಥಿತರಿದ್ದರು.

Related Posts

Leave a Reply

Your email address will not be published.