ರಾಜ್ಯದ 16ನೇ ವಿಧಾನಸಭೆ ಅಧಿವೇಶನ – ಕರಾವಳಿ ಶಾಸಕರಿಂದ ಪ್ರಮಾಣವಚನ ಸ್ವೀಕಾರ
ರಾಜ್ಯದ 16 ನೇ ವಿಧಾನಸಭೆ ನೂತನ ಚುನಾಯಿತರ ಅಧಿವೇಶನ ನಡೆಯುತ್ತಿದ್ದು, ಮೂರು ದಿನಗಳ ಕಾಲ ಅಧಿವೇಶನ ನಡೆಯಲಿದೆ. ಹಂಗಾಮಿ ಸಭಾಧ್ಯಕ್ಷರಾಗಿ ಆಯ್ಕೆಯಾಗಿರುವ ಕಾಂಗ್ರೆಸ್‍ನ ಹಿರಿಯ ಶಾಸಕ ಆರ್.ವಿ. ದೇಶಪಾಂಡೆ ಅವರು ನೂತನ ಶಾಸಕರಿಗೆ ಪ್ರಮಾಣವಚನ ಭೋದಿಸಿದರು. ಕರಾವಳಿಯ ಶಾಸಕರಾದ ಯು.ಟಿ. ಖಾದರ್, ಡಾ. ವೈ ಭರತ್ ಶೆಟ್ಟಿ, ಸುಳ್ಯದ ಶಾಸಕಿ ಭಾಗೀರಥಿ ಮುರುಳ್ಯ, ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ, ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಇದಕ್ಕೂ ಮೊದಲು ವರುಣಾ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಸಿದ್ದರಾಮಯ್ಯ ಅವರು ಭಗವಂತನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಸಿದರೆ, ಕನಕಪುರ ಕ್ಷೇತ್ರದ ಶಾಸಕರಾಗಿ ಡಿ.ಕೆ.ಶಿವಕುಮಾರ್ ಗಂಗಾಧರ ಅಜ್ಜಯ್ಯನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ.