ಮತದಾನ ಮಾಡದವರಿಗೆ ರಾಜ್ಯದ ಕೆಲವು ಪ್ರವಾಸಿ ತಾಣಗಳ ಪ್ರವೇಶ ನಿರ್ಬಂಧ

ಮತದಾನ ಮಾಡದವರಿಗೆ ರಾಜ್ಯದ ಕೆಲವು ಪ್ರವಾಸಿ ತಾಣಗಳಲ್ಲಿ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಮತದಾನ ದಿನದ ಮೊದಲೇ ಕೆಲವು ಸ್ಥಳಗಳಲ್ಲಿ ಮೇ 10ರಂದು ಪ್ರವೇಶವಿಲ್ಲ ಎಂಬ ಬೋರ್ಡ್‌ ಲಗತ್ತಿಸಲಾಗಿದ್ದು, ಪ್ರಮುಖವಾಗಿ ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿ ಬೆಟ್ಟಕ್ಕೆ ಪ್ರವೇಶ ನಿರ್ಬಂಧಿಸಿ ಆದೇಶ ಹೊರಡಿಸಲಾಗಿದೆ. ಬೆಳಗ್ಗೆಯಿಂದಲೇ ಇಲ್ಲಿ ಪ್ರವೇಶಕ್ಕೆ ಅವಕಾಶವಿರುವುದಿಲ್ಲ.ಶಿವಮೊಗ್ಗ ಜಿಲ್ಲೆಯ ಜೋಗ ಜಲಪಾತ, ಕುಪ್ಪಳ್ಳಿ ಯಲ್ಲಿರುವ ಕವಿಮನೆ, ಕುವೆಂಪು ಜನ್ಮಸ್ಥಳ, ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹಧಾಮವನ್ನು ಬಂದ್‌ ಮಾಡಲಾಗಿದೆ. ಸಿಂಗಂದೂರು ಚೌಡೇಶ್ವರಿ ದೇವಾಲಯಕ್ಕೆ ಬರಬೇಡಿ ಎಂದು ದೇಗುಲದ ಆಡಳಿತ ಮಂಡಳಿ ಕೇಳಿಕೊಂಡಿದೆ. ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಶಾಂತಿಸಾಗರ (ಸೂಳೆಕೆರೆ)ಯಲ್ಲಿ ಬೋಟಿಂಗ್‌ ನಿಲ್ಲಿಸುವ ನಿರ್ಧಾರ ಕೈಗೊಳ್ಳಲಾಗಿದೆ. ಕೊಡಗು ಜಿಲ್ಲೆಯಲ್ಲಿಯೂ ಮತದಾನ ಮಾಡದವರಿಗೆ ನಿರ್ಬಂಧ ವಿಧಿಸಿ ಆದೇಶ ಹೊರಡಿಸಲಾಗಿದೆ.ಇನ್ನು ಕೆಲವು ಜಿಲ್ಲೆಯಲ್ಲಿ ಬೇರೆಯದೇ ರೀತಿಯ ನಿರ್ಧಾರ ಕೈಗೊಳ್ಳಲಾಗಿದ್ದು, ಮತದಾನ ಮಾಡಿ ಬಂದವರಿಗಷ್ಟೇ ಪ್ರವಾಸಿ ತಾಣಗಳಿಗೆ ಪ್ರವೇಶ ನೀಡಲು ನಿರ್ಧರಿಸಲಾಗಿದೆ.

Related Posts

Leave a Reply

Your email address will not be published.