ಕಟಪಾಡಿ ಪೇಟೆ ಸರಣಿ ಅಪಘಾತ
ಕಾರು ಚಾಲಕನ ಅವಾಂತರದಿಂದಾಗಿ ರಸ್ತೆಯಂಚಿನಲ್ಲಿ ನಿಲ್ಲಿಸಿದ ಕಾರು ಸಹಿತ ಸ್ಕೂಟರ್ ತೀವ್ರ ಜಖಂ ಗೊಂಡು ಇಬ್ಬರು ಗಾಯಗೊಂಡ ಘಟನೆ ಕಟಪಾಡಿ ಪೇಟೆಯಲ್ಲಿ ರಾತ್ರಿ ಸಂಭವಿಸಿದೆ. ಉಡುಪಿ ಕಡೆಯಿಂದ ಕಟಪಾಡಿ ಕಡೆಗೆ ಸರ್ವಿಸ್ ರಸ್ತೆಯಲ್ಲಿ ಅತೀ ವೇಗವಾಗಿ ಮುನ್ನುಗ್ಗಿ ಬಂದ ಕಾರು ರಸ್ತೆಯಂಚಿನಲ್ಲಿ ನಿಲ್ಲಿಸಿದ ಮತ್ತೊಂದು ಕಾರಿಗೆ ಡಿಕ್ಕಿಯಾಗಿ ನಿಲ್ಲದೆ ಸ್ಕೂಟರ್ ಗೆ ಡಿಕ್ಕಿಯಾಗಿ ಪಕ್ಕದ ಪಾಸ್ಟ್ ಫುಡ್ ಅಂಗಡಿಯೊಳಗೆ ನುಗ್ಗಿದೆ. ಅಂಗಡಿಯಾತನಿಗೆ ಹಾಗೂ ಆಹಾರ ಸೇವಿಸುತ್ತಿದ್ದ ಸಮೀಪದ ನಿವಾಸಿ ಭುವನೇಶ್ ಎಂಬುವರು ಗಾಯಗೊಂಡ ಘಟನೆ ನಡೆದಿದೆ. ಗಾಯಾಳುಗಳನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಗಿದೆ. ಕಾರು ಚಲಾಯಿಸುತ್ತಿದ್ದ ವಯೋವೃದ್ಧರಿಗೂ ಸಣ್ಣ ಪುಟ್ಟ ಗಾಯಗಳಾಗಿದೆ. ರಸ್ತೆಯಲ್ಲಿ ಜನರ ಓಡಾಟ ಇಲ್ಲದಿರುವುದರಿಂದ ಬಾರೀ ದುರಂತ ತಪ್ಪಿದಂತ್ತಾಗಿದೆ