ಕಟೀಲು : ಬಸ್‍ಗೆ ಬೆಂಕಿ, ಪ್ರಯಾಣಿಕರು ಹಾಗೂ ಬಸ್ ಚಾಲಕ ಪಾರು

ಚಲಿಸುತ್ತಿದ್ದ ಬಸ್‍ಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಘಟನೆ ಕಟೀಲು ದೇವಸ್ಥಾನದ ಮುಂಭಾಗದಲ್ಲಿ ನಡೆದಿದ್ದು, ಘಟನೆಯಲ್ಲಿ ಪ್ರಯಾಣಿಕರು ಹಾಗೂ ಬಸ್ ಚಾಲಕ ಅಪಾಯದಿಂದ ಪಾರಾಗಿದ್ದಾರೆ.ಕಟೀಲು ದೇವಸ್ಥಾನದ ಮುಂಭಾಗದಲ್ಲಿ ನಡೆದಿದ್ದು, ಘಟನೆಯಲ್ಲಿ ಪ್ರಯಾಣಿಕರು ಹಾಗೂ ಬಸ್ ಚಾಲಕ ಅಪಾಯದಿಂದ ಪಾರಾಗಿದ್ದಾರೆ.

ದೇವಸ್ಥಾನದ ಮುಂಭಾಗವೇ ಬೆಂಕಿ ಹೊತ್ತಿಕೊಂಡಿದ್ದು, ಈ ವೇಳೆ ಬಸ್ ನಲ್ಲಿ ಇಬ್ಬರ ಮಹಿಳೆಯರು ಮತ್ತು ಬಸ್ ಚಾಲಕ ಇದ್ದರು ಎಂದು ಹೇಳಲಾಗಿದ್ದು, ಮೂವರು ಬಸ್ ನಿಂದ ಇಳಿದ ಕಾರಣ ಅಪಾಯದಿಂದ ಪಾರಾಗಿದ್ದಾರೆ.ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಅಂದಾಜಿಸಲಾಗಿದೆ. ಈ ವೇಳೆ ಸ್ಥಳದಲ್ಲಿದ್ದ ನೀರು ಸರಬರಾಜ ಮಾಡುವ ಟ್ಯಾಂಕರ್ ಇದ್ದ ಕಾರಣ ಕೂಡಲೇ ಬೆಂಕಿಯನ್ನು ನಂದಿಸಲಾಗಿದೆ.