ಕಟೀಲು ಯಕ್ಷಗಾನದ ಕಾಲಮಿತಿ ಹಿಂಪಡೆಯುವಂತೆ ಆಗ್ರಹಿಸಿ ಪಾದಯಾತ್ರೆ

ಮಂಗಳೂರು: ಕಟೀಲು ಯಕ್ಷಗಾನ ಮೇಳಗಳ ಪ್ರದರ್ಶನ ವನ್ನು ಕಾಲಮಿತಿಗೊಳಪಡಿಸುವ ನಿರ್ಧಾರವನ್ನು ಹಿಂಪಡೆಯಬೇಕು, ಯಕ್ಷಗಾನ ಪರಂಪರೆಯಂತೆ ರಾತ್ರಿ ಯಿಂದ ಬೆಳಗ್ಗಿನವರೆಗೆ ಯಕ್ಷಗಾನ ಪ್ರದರ್ಶನಗೊಳ್ಳಬೇಕು ಎಂದು ಆಗ್ರಹಿಸಿ ಶ್ರೀ ಕಟೀಲು ಮೇಳದ ಯಕ್ಷಗಾನ ಸೇವಾ ಸಮಿತಿಗಳು ಮತ್ತು ಖಾಯಂ ಸೇವಾದಾರರ ಒಕ್ಕೂಟವಾದ ಶ್ರೀ ಕಟೀಲು ಯಕ್ಷಸೇವಾ ಸಮನ್ವಯ ಸಮಿತಿ ದಕ್ಷಿಣ ಕನ್ನಡ ಮತ್ತು ಉಡುಪಿ ವತಿಯಿಂದ ನ. 6ರಂದು ಬೆಳಗ್ಗೆ 8.30ರಿಂದ ಬಜಪೆ ಶ್ರೀ ಶಾರದಾ ಶಕ್ತಿ ಮಂಟಪದಿಂದ ಶ್ರೀ ಕ್ಷೇತ್ರ ಕಟೀಲಿಗೆ ಪಾದಯಾತ್ರೆ ಆಯೋಜಿಸಲಾಗಿದೆ ಎಂದು ಸಮನ್ವಯ ಸಮಿತಿ ಸಂಚಾಲಕ ಅಶೋಕ ಕೃಷ್ಣಾಪುರ ತಿಳಿಸಿದ್ದಾರೆ.