ಕಾಟಿಪಳ್ಳದ ಗಣೇಶಪುರದಲ್ಲಿ ವಾಹನಕ್ಕೆ ಸೈಡ್ ಕೊಡುವ ವಿಚಾರವಾಗಿ ಗಲಾಟೆ

ವಾಹನಕ್ಕೆ ಸೈಡ್ ಕೊಡುವ ವಿಚಾರವಾಗಿ ನಡೆದ ಗಲಾಟೆಯು ಪರಸ್ಪರ ಹಲ್ಲೆ ನಡೆದು ಕೆಲಕಾಲ ಉದ್ವಿಘ್ನ ಪರಿಸ್ಥಿತಿ ನಿರ್ಮಾಣವಾದ ಘಟನೆ ಕಾಟಿಪ್ಪಳ್ಳದ ಗಣೇಶಪುರದಲ್ಲಿ ನಡೆದಿದೆ. ಇತ್ತೀಚೆಗೆ ದುಷ್ಕರ್ಮಿಗಳಿಂದ ಹತ್ಯೆಯಾದ ಫಾಝಿಲ್ ಸಹೋದರ ಆದಿಲ್ ಮತ್ತು ನಾಗೇಶ್ ಎಂಬವರ ನಡುವೆ ಸೈಡ್ ಕೊಡುವ ವಿಚಾರವಾಗಿ ಗಲಾಟೆ ನಡೆದಿದೆ. ನಾಗೇಶ್ ಹಾಗು ಜೊತೆಗಿದ್ದವರು ಫಾಝಿಲ್ ಸಹೋದರ ಆದಿಲ್ ಮೇಲೆ ಹಲ್ಲೆ ನಡೆಸಿದ್ದು, ಹಲ್ಲೆ ನಡೆಸಿದವರನ್ನು ಸಾರ್ವಜನಿಕರು ಪೆÇಲೀಸರಿಗೆ ಒಪ್ಪಿಸಿದ್ದಾರೆ.
