ಕಾಟಿಪಳ್ಳದ ಜಲೀಲ್ ಹತ್ಯೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ

ಕಾಟಿಪಳ್ಳ ಜಲೀಲ್ ಹತ್ಯೆ ಪ್ರಕರಣದಲ್ಲಿ ಪೆÇಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಕಾಟಿಪಳ್ಳ ನಾಲ್ಕನೇ ಬ್ಲಾಕ್ ಕೃಷ್ಣಾಪುರ ನಿವಾಸಿ ಲಕ್ಷ್ಮೀಶ ದೇವಾಡಿಗ(28) ಬಂಧಿತ. ಈಗಾಗಲೇ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಶೈಲೇಶ್ ಪೂಜಾರಿ, ಸವಿನ್ ಕಾಂಚನ್ ಮತ್ತು ಪವನ್ ಎಂಬವರನ್ನು ಬಂಧಿಸಲಾಗಿತ್ತು. ಇದೀಗ ಪ್ರಮುಖ ಆರೋಪಿಯನ್ನು ಬಂಧಿಸಲಾಗಿದೆ. ಲಕ್ಷ್ಮೀಶ ಮತ್ತು ಶೈಲೇಶ್ ಸೇರಿಕೊಂಡು ಜಲೀಲ್ ಕೊಲೆಗೆ ಸಂಚು ಹೆಣೆದಿದ್ದರು ಎನ್ನಲಾಗಿದೆ.
