ಕಾಠ್ಮಂಡು: 72 ಮಂದಿಯನ್ನು ಹೊತ್ತೊಯ್ಯುತ್ತಿದ್ದ ವಿಮಾನ ಪತನ

ನೇಪಾಳದ ಕಾಠ್ಮಂಡುವಿನಿಂದ ಹೊರಟ ವಿಮಾನವೊಂದು ಪೋಖರಾ ವಿಮಾನ ನಿಲ್ದಾಣದಲ್ಲಿ ಹೊತ್ತಿ ಉರಿದಿದ್ದು, ವಿಮಾನದಲ್ಲಿದ್ದ 45ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ.
ಯೇತಿ ವಿಮಾನಯಾನ ಸಂಸ್ಥೆಗೆ ಸೇರಿದ ವಿಮಾನವು ಪೋಖರಾ ಏರ್ ಪೋರ್ಟ್ ನಲ್ಲಿ ಲ್ಯಾಂಡ್ ಆಗುವ ವೇಳೆ ಪತನವಾಗಿದೆ. ಇದುವರೆಗೆ 45 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ವಿಮಾನದಲ್ಲಿ 68 ಪ್ರಯಾಣಿಕರು ಮತ್ತು ನಾಲ್ಕು ಮಂದಿ ಸಿಬ್ಬಂದಿ ಪ್ರಯಾಣಿಸುತ್ತಿದ್ದರು. ರಕ್ಷಣಾ ಕಾರ್ಯ ಭರದಿಂದ ಸಾಗುತ್ತಿದೆ.
ವಿಮಾನವು ಪೋಖರಾ ವಿಮಾನ ನಿಲ್ದಾಣದಲ್ಲಿ ಇಳಿಯುವ ಸಮೀಪದಲ್ಲಿದ್ದಾಗ, ಸೇಟಿ ನದಿಯ ದಡದಲ್ಲಿ ಪತನಗೊಂಡಿತು. ಟೇಕ್–ಆಫ್ ಆದ ಸುಮಾರು 20 ನಿಮಿಷಗಳ ನಂತರ ಅಪಘಾತ ಸಂಭವಿಸಿದೆ.