ಕಾಪು : ಮಳೆಗೆ ಮನೆ ಕುಸಿದು ಬಿದ್ದು ಲಕ್ಷಾಂತರ ರೂಪಾಯಿ ನಷ್ಟ
ಪುರಸಭಾ ವ್ಯಾಪ್ತಿಯ ತೆಂಕಪೇಟೆಯಲ್ಲಿ ಮನೆಯೊಂದು ಕುಸಿದು ಬಿದ್ದು ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿದೆ. ಕಾಪು ತೆಂಕಪೇಟೆ ನಿವಾಸಿ ವಿಜಯಲಕ್ಷ್ಮಿ ಕಾಮತ್ ಅವರಿಗೆ ಸೇರಿದ ಹಳೆ ಹೆಂಚಿನಮನೆ ಭಾರೀ ಮಳೆಗೆ ಸಂಪೂರ್ಣ ಕುಸಿದು ಬಿದ್ದಿದೆ. ಮನೆಯಲ್ಲಿ ಯಾರೂ ವಾಸಿಸುತ್ತಿಲ್ಲವಾಗಿದ್ದು ಇದರಿಂದಾಗಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ .