ಉದ್ಯಾವರ ಗ್ರಾ.ಪಂ ಸದಸ್ಯ ಮಿಥೇಶ್ ಪೂಜಾರಿ ಕಾಂಗ್ರೆಸ್ ನಿಂದ ಬಿಜೆಪಿ ತೆಕ್ಕೆಗೆ
ಕಾಪು ಬಿಜೆಪಿ ಕಚೇರಿಯಲ್ಲಿ ಉದ್ಯಾವರ ಗ್ರಾಮ ಪಂಚಾಯತ್ 6ನೇ ವಾರ್ಡನ್ನು 2 ಬಾರಿ ಪ್ರತಿನಿಧಿಸಿರುವ ಗ್ರಾಮ ಪಂಚಾಯತ್ ಸದಸ್ಯ ಹಾಗೂ ಉದ್ಯಾವರ ಗ್ರಾಮೀಣ ಯೂತ್ ಕಾಂಗ್ರೆಸ್ ಅಧ್ಯಕ್ಷ ಮಿಥೇಶ್ ಪೂಜಾರಿ ಕಾಂಗ್ರೆಸ್ ತೊರೆದು ಭಾರತೀಯ ಜನತಾ ಪಾರ್ಟಿ ಸೇರ್ಪಡೆಗೊಂಡರು.
ಶಾಸಕ ಲಾಲಾಜಿ ಮೆಂಡನ್ ಪಕ್ಷದ ಧ್ವಜ ನೀಡಿ ಅವರನ್ನು ಪಕ್ಷಕ್ಕೆ ಬರಮಾಡಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಕಾಪು ವಿಧಾನಸಭಾ ಚುನಾವಣೆಯ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ, ಜಿಲ್ಲಾ ಬಿ.ಜೆ.ಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಕ್ಷೇತ್ರ ಅಧ್ಯಕ್ಷರು ಶ್ರೀಕಾಂತ್ ನಾಯಕ್, ಉದ್ಯಾವರ ಗ್ರಾಮ ಪಂಚಾಯತ್ ಅಧ್ಯಕ್ಷ ರಾಧಾಕೃಷ್ಣ ಶ್ರೀಯಾನ್ ಹಾಗೂ ಪಕ್ಷದ ವಿವಿಧ ಸ್ತರದ ಜವಾಬ್ದಾರಿ ಹೊಂದಿರುವ ಪಕ್ಷದ ಪ್ರಮುಖರು, ಉದ್ಯಾವರ ಪಂಚಾಯತ್ ವ್ಯಾಪ್ತಿಯ ಪಕ್ಷದ ಪ್ರಮುಖರು, ಜನಪ್ರತಿನಿಧಿಗಳು ಉಪಸ್ಥಿತರಿದ್ದರು.