ಕಾಪು ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದಲ್ಲಿ ಶ್ರೀ ರಾಘವೇಂದ್ರ ಸ್ವಾಮೀಜಿಯವರ ಆರಾಧನಾ ಮಹೋತ್ಸವ

ಕಾಪು ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನ, ಉಚ್ಚಿಲ ರಾಘವೇಂದ್ರ ಮಠ, ಕಳತ್ತೂರು ರಾಘವೇಂದ್ರ ಮಠ ಸೇರಿದಂತೆ ತಾಲೂಕಿನ ವಿವಿಧೆÉಡೆ ಶ್ರೀ ರಾಘವೇಂದ್ರ ಸ್ವಾಮೀಜಿಯವರ ಆರಾಧನಾ ಮಹೋತ್ಸವ ವಿಜೃಂಭಣೆಯಿಂದ ನಡೆಯಿತು.

ಕಾಪು ಶ್ರೀ ಲಕ್ಷ್ಮೀ ಜನಾರ್ಧನ ದೇವಸ್ಥಾನದಲ್ಲಿ ಶ್ರೀನಿವಾಸ ತಂತ್ರಿ ನೇತೃತ್ವದಲ್ಲಿ ಅರ್ಚಕರಾದ ಜನಾರ್ದನ ತಂತ್ರಿಗಳ ಸಹಕಾರದಲ್ಲಿ ರಾಘವೇಂದ್ರ ಶ್ರೀಗಳ ಆರಾಧನಾ ಮಹೋತ್ಸವದ ಧಾರ್ಮಿಕ ವಿಧಿ ವಿಧಾನಗಳು ಜರಗಿತು. ಆರಾಧನೋತ್ಸವದ ಅಂಗವಾಗಿ ಭಜನಾ ಕಾರ್ಯಕ್ರಮ, ಅನ್ನ ಸಂತರ್ಪಣೆ ನೆರವೇರಿತು.
