ಕೆಡ್ಡಸ ದಿನಾಚರಣೆ–2026: ಸುಳ್ಯದಲ್ಲಿ ಸಂಭ್ರಮಾಚರಣೆ
ಸುಳ್ಯ: ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ, ಮಡಿಕೇರಿ ಹಾಗೂ ಮಹಾತ್ಮಗಾಂಧಿ ಮಲ್ನಾಡು ಆಂಗ್ಲಮಾಧ್ಯಮ ಪ್ರೌಢಶಾಲೆ, ಕೊಡಿಯಾಲಬೈಲು ಇವರ ಸಂಯುಕ್ತ ಆಶ್ರಯದಲ್ಲಿ ಕೆಡ್ಡಸ ದಿನಾಚರಣೆ–2026 ಕಾರ್ಯಕ್ರಮವು ಫೆಬ್ರವರಿ 14ರಂದು ಬೆಳಿಗ್ಗೆ 10 ಗಂಟೆಗೆ ಗೌಡ ಸಮುದಾಯ ಭವನದಲ್ಲಿ ನಡೆಯಲಿದೆ.
ಕಾರ್ಯಕ್ರಮಕ್ಕೆ ಅಕಾಡೆಮಿಯ ಅಧ್ಯಕ್ಷರಾದ ಶ್ರೀ ಸದಾನಂದ ಮಾವಜಿ ಅಧ್ಯಕ್ಷತೆ ವಹಿಸಲಿದ್ದು, ನೆಹರು ಮೆಮೋರಿಯಲ್ ಕಾಲೇಜು ಸುಳ್ಯದ ವಿಶ್ರಾಂತ ಪ್ರಾಂಶುಪಾಲರಾದ ಪ್ರೊ. ಎಂ. ಬಾಲಚಂದ್ರ ಗೌಡ ಉದ್ಘಾಟನೆ ನೆರವೇರಿಸಲಿದ್ದಾರೆ. ಶ್ರೀ ಶಾರದಾ ಪದವಿ ಪೂರ್ವ ಕಾಲೇಜು ಸುಳ್ಯದ ಅರ್ಥಶಾಸ್ತ್ರ ಉಪನ್ಯಾಸಕಿ ಶ್ರೀಮತಿ ಸ್ವರ್ಣಕಲಾ ಎ.ಎಸ್ ಮುಖ್ಯ ಉಪನ್ಯಾಸ ನೀಡಲಿದ್ದಾರೆ.
ಗೌಡರ ಯುವ ಸೇವಾ ಸಂಘ (ರಿ.) ಸುಳ್ಯದ ಅಧ್ಯಕ್ಷರಾದ ಶ್ರೀ ಪಿ.ಎಸ್. ಗಂಗಾಧರ್ ಸೇರಿದಂತೆ ಹಲವು ಗಣ್ಯರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಸ್ಥಳೀಯ ಶಿಕ್ಷಣ ಸಂಸ್ಥೆಗಳ ಪ್ರತಿನಿಧಿಗಳು, ಅಕಾಡೆಮಿಯ ಪದಾಧಿಕಾರಿಗಳು ಮತ್ತು ಸದಸ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ.
ಅರೆಭಾಷೆಯ ಸಂಸ್ಕೃತಿ, ಪರಂಪರೆ ಮತ್ತು ಸಾಹಿತ್ಯ ಪರಂಪರೆಯನ್ನು ಉಳಿಸಿ ಬೆಳೆಸುವ ಉದ್ದೇಶದಿಂದ ಈ ದಿನಾಚರಣೆಯನ್ನು ಆಯೋಜಿಸಲಾಗಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಆಯೋಜಕರು ಮನವಿ ಮಾಡಿದ್ದಾರೆ.


















