ಕಿನ್ನಿಗೋಳಿ : ಅವೈಜ್ಞಾನಿಕ ಗ್ಯಾರಂಟಿಗಳಿಂದ ರಾಜ್ಯ ಸರ್ಕಾರದ ಬೊಕ್ಕಸ ಖಾಲಿ – ಶಾಸಕ ಉಮಾನಾಥ ಕೋಟ್ಯಾನ್

ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರಕಾರ ತೈಲ ಬೆಲೆಯ ಮೇಲಿನ ಮಾರಾಟ ತೆರಿಗೆ ಏರಿಸಿ ಜನಸಾಮ್ಯಾನರ ಮೇಲೆ ಬರೆ ಎಳೆದಿದ್ದಾರೆ. ವಾಲ್ಮೀಕಿ ನಿಗಮ ಸಹಿತ ಅನೇಕ ಭ್ರಷ್ಟಾಚಾರದಲ್ಲಿ ತೊಡಗಿದ ಮುಖ್ಯಮಂತ್ರಿಗಳು ಬೆಲೆ ಏರಿಕೆ ಹಾಗೂ ಭ್ರಷ್ಟಾಚಾರದ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಮುಲ್ಕಿ ಮೂಡಬಿದಿರೆ ಕ್ಷೇತ್ರದ ಶಾಸಕ ಉಮಾನಾಥ ಕೋಟ್ಯಾನ್ ಆಗ್ರಹಿಸಿದ್ದಾರೆ.
ಕಿನ್ನಿಗೋಳಿಯ ಯುಗಪುರುಷ ಸಭಾಭವನ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ಮತ ಹಾಕದವರ ವಿರುದ್ಧ ಸೇಡು ತೀರಿಸಿಕೊಳ್ಳಲು ಕಾಂಗ್ರೆಸ್ ಮುಂದಾಗಿದೆ. ಅಲ್ಲದೆ ಅವೈಜ್ಞಾನಿಕ ಗ್ಯಾರಂಟಿಗಳಿಂದ ರಾಜ್ಯ ಸರ್ಕಾರದ ಬೊಕ್ಕಸ ಖಾಲಿಯಾಗಿದ್ದು ರಾಜ್ಯದ ಬಡಜನರ ಮೇಲೆ ತೆರಿಗೆ ಭಾರ ಹೊರಿಸಿ ಖಜಾನೆ ಭರ್ತಿ ಮಾಡಲು ಹೊರಟಿದೆ ಎಂದು ಆರೋಪಿಸಿದರು. ರಾಜ್ಯ ಸರ್ಕಾರ ಈಗಾಗಲೆ ವಿದ್ಯುತ್ ಬಸ್ ಪ್ರಯಾಣ, ಹಾಲು, ತರಕಾರಿ ಬೇಳೆಕಾಳುಗಳು, ಮದ್ಯದ ಬೆಲೆ ಏರಿಕೆ ಮಾಡಿದ್ದು ಇದೀಗ ಪೆಟ್ರೋಲ್ ಡಿಸೇಲ್ ಮೇಲಿನ ಮಾರಾಟ ತೆರಿಗೆಯನ್ನು ಹೆಚ್ಚಿಸಿ ರಾಜ್ಯದ ಸಾಮಾನ್ಯ ಜನರ ಜೇಬಿಗೆ ಕತ್ತರಿ ಹಾಕುವ ಕೆಲಸ ಮಾಡಲಾಗಿದೆ.ಸರಕಾರ ನಡೆಸಲು ಆಗದಿದ್ದರೆ ಸಿಎಂ ರಾಜೀನಾಮೆ ಕೊಡಲಿ ಎಂದರು.ಸರಕಾರದಿಂದ ರೈತರಿಗೆ ನೀಡುವ ಕೃಷಿ ಯಂತ್ರೋಪಕರಣಗಳನ್ನು ಸ್ಧಗಿತಗೊಳಿಸಿರುವ ಸರಕಾರ ರೈತ ವಿರೋಧಿ ಸರಕಾರವಾಗಿದ್ದು ಶಿಕ್ಷಕರಿಗೆ ಸರಿಯಾದ ವೇತನ ನೀಡದ ಸರಕಾರ ಜನ ವಿರೋಧಿ ಸರ್ಕಾರ ಎಂದು ಹರಿಹಾಯ್ದರು.
ಸುದ್ದಿಗೋಷ್ಠಿಯಲ್ಲಿ ಮುಲ್ಕಿ ಮೂಡಬಿದಿರೆ ಮಂಡಲಾಧ್ಯಕ್ಷ ದಿನೇಶ್ ಪುತ್ರನ್.ಬಿಜೆಪಿ ಮುಖಂಡರು ಗಳಾದ ಈಶ್ವರ್ ಕಟೀಲ್.ಸುನಿಲ್ ಆಳ್ವಾ.ರಂಜೀತ್ ರೈ ತೋಡಾರು.ಭುವನಾಭಿರಾಮ ಉಡುಪ ಮತ್ತಿತರರು ಉಪಸ್ಧಿತರಿದ್ದರು.
