ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳಕ್ಕೆ ಡಾ. ಜಿ. ಪರಮೇಶ್ವರ್ ಭೇಟಿ, ವಿಶೇಷ ಪೂಜೆ ಸಲ್ಲಿಕೆ

ರಾಜ್ಯ ಗೃಹಸಚಿವ ಡಾ.ಜಿ.ಪರಮೇಶ್ವರ್ ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಬೆಳಗ್ಗೆ ಶ್ರೀಮೂಕಾಂಬಿಕಾ ದೇವಳದಲ್ಲಿ ಪ್ರಧಾನ ಅರ್ಚಕ ಕೆ.ಎನ್.ಸುಬ್ರಹ್ಮಣ್ಯ ಅಡಿಗರ ನೇತೃತ್ವದಲ್ಲಿ ನಡೆದ ಚಂಡಿಕಾಹೋಮ ಕಾರ್ಯಕ್ರಮದಲ್ಲಿ ಸಚಿವರು ಕುಟುಂಬ ಸಮೇತರಾಗಿ ಭಾಗಿಯಾದರು. ಇದೇ ಸಂದರ್ಭದಲ್ಲಿ ಸಚಿವರನ್ನು ದೇವಸ್ಥಾನದ ವತಿಯಿಂದ ಗೌರವಿಸಲಾಯಿತು.

ಸಂದರ್ಭದಲ್ಲಿ ದೇವಳದ ಅರ್ಚಕ ರಾಮಚಂದ್ರ ಅಡಿಗ, ಕಾರ್ಯನಿರ್ವಹಣಾಧಿಕಾರಿ ರವಿ ಕೋಟಾರಗಸ್ತಿ, ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಡಾ.ಅತುಲ್ ಕುಮಾರ್ ಶೆಟ್ಟಿ, ರತ್ನಾ ರಮೇಶ್ ಕುಂದರ್, ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ, ಕಾಂಗ್ರೆಸ್ ಮುಖಂಡರಾದ ದಿನೇಶ್ ಹೆಗ್ಡೆ ಮೊಳಹಳ್ಳಿ, ಉದಯ್ ಕುಮಾರ್ ಶೆಟ್ಟಿ ಮುನಿಯಾಲು, ಪ್ರದೀಪ್ ಶೆಟ್ಟಿ ಗುಡಿಬೆಟ್ಟು, ವಂಡಬಳ್ಳಿ ಜಯರಾಮ ಶೆಟ್ಟಿ, ರಮೇಶ್ ಗಾಣಿಗ ಕೊಲ್ಲೂರು ಮೊದಲಾದವರು ಉಪಸ್ಥಿತರಿದ್ದರು.

Related Posts

Leave a Reply

Your email address will not be published.