40% ಕಮಿಷನ್ ತನಿಖೆಗೆ ಮುಕ್ತ ಸ್ವಾಗತ : ಕೋಟಾ ಶ್ರೀನಿವಾಸ ಪೂಜಾರಿ

ಡಿಸಿಎಂ ಆಗಿರುವ ಡಿ.ಕೆ. ಶಿವಕುಮಾರ್ ಅವರು ಪೊಲೀಸ್ರ ಮೇಲೆ ಕೇಸರಿ ಶಾಲಿನ ಆರೋಪ ಮಾಡಿದ್ದಾರೆ. ಅಧಿಕಾರಿಗಳ ಮೇಲೆ ಹರಿಹಾಯ್ದು ಎಚ್ಚರಿಕೆ ಕೊಟ್ಟಿರೋದು ಕಂಡು ಬಂದಿದೆ. ಕೇಸರಿ ಶಾಲು ಈ ರಾಜ್ಯದಲ್ಲಿ ನಿಷೇಧ ಇಲ್ಲ, ಕರ್ತವ್ಯದಲ್ಲಿ ಇದ್ದಾಗ ಯಾರೂ ಕೇಸರಿ ಪ್ರಯೋಗ ಮಾಡಿಲ್ಲ. ಅವರ ಖಾಸಗಿ ಜೀವನದ ಉಡುಪುಗಳ ಬಗ್ಗೆ ಪ್ರಶ್ನೆ ಮಾಡಿ ಡಿ.ಕೆ ಶಿವಕುಮಾರ್ ದ್ವೇಷ ತೀರಿಸಿಕೊಂಡಿದ್ದಾರೆ. ಇದು ಸರಿಯಲ್ಲ, ಅವರು ತಮ್ಮ ಮಾತನ್ನು ಪುನರ್ ಪರಿಶೀಲನೆ ಮಾಡಬೇಕು ಎಂದು ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಅವರು ಮಂಗಳೂರಿನಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದರು. ಚಿತ್ರದುರ್ಗ ಜಿಲ್ಲೆಯ ಶಿಕ್ಷಕರು ಮುಖ್ಯಮಂತ್ರಿಗಳ ಸಾಲದ ಬಗ್ಗೆ ಮಾತನಾಡಿದ್ದಕ್ಕೆ ಅಮಾನತು ಮಾಡಲಾಗಿದೆ. ಡಿಕೆಶಿ ಮತ್ತು ಸಿದ್ದರಾಮಯ್ಯ ಸರ್ಕಾರದಲ್ಲಿ ದ್ವೇಷ ಸಾಧಿಸುವ ವಾತಾವರಣ ಕಂಡು ಬರುತ್ತಿದೆ. ಇದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಶೋಭೆ ತರುವಂತದ್ದಲ್ಲ. ಸಿದ್ದರಾಮಯ್ಯ ಮತ್ತು ಡಿಕೆಶಿ 40% ಕಮಿಷನ್ ತನಿಖೆ ಮಾಡುತ್ತೇವೆ ಎಂದಿದ್ದಾರೆ. ಈ ತನಿಖೆಯನ್ನು ಮುಕ್ತವಾಗಿ ನಾನು ಸ್ವಾಗತ ಮಾಡ್ತೇನೆ. ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಇಲಾಖೆ ಮಂತ್ರಿಯಾಗಿದ್ದ ನನ್ನಿಂದಲೇ ತನಿಖೆ ಪ್ರಾರಂಭವಾಗಲಿ ಎಂದು ಕೋಟಾ ಹೇಳಿದರು.

ಹಿಂದುತ್ವದ ವಿಚಾರ ಇಟ್ಟುಕೊಂಡು ಅವರ ಗುರಿ ಇದೆ ಅನ್ನೋದು ನಮಗೆ ಅರ್ಥವಾಗಿದೆ. ಮುಂದಿನ ದಿನಗಳು ಹಿಂದುತ್ವ ಮತ್ತು ಹಿಂದುಗಳಿಗೆ ಕಠಿಣ ದಿನವಾಗಲಿದೆ. ಯಾರನ್ನಾದರೂ ಓಲೈಕೆ ಮಾಡಲು ಹಿಂದುತ್ವದ ಚಟುವಟಿಕೆಗಳನ್ನು ನಿಷೇಧ ಮಾಡುವುದು ಮತ್ತು ನೈತಿಕ ಪೆÇಲೀಸ್ ಗಿರಿ ಆರೋಪ ಮಾಡಿ ಬಂಧಿಸುವ ಕೆಲಸ ಮುಂದೆ ನಡೆಯುತ್ತದೆ ಅಂತ ನಮಗೆ ಅನಿಸುತ್ತದೆ. ಮುಂದಿನ ದಿನಗಳಲ್ಲಿ ಗೋಹತ್ಯೆ ಕಾಯ್ದೆ, ಮತಾಂತರ ಕಾಯ್ದೆ ವಿರೋಧಿಸುವ ಕಾರ್ಯತಂತ್ರ ರೂಪುಗೊಂಡಿದೆ. ವಿರೋಧ ಪಕ್ಷವಾಗಿ ನಾವು ಜನಸಾಮಾನ್ಯರಿಗೆ ರಕ್ಷಣೆ ಕೊಡುತ್ತೇವೆ ಎಂದು ಕೋಟಾ ಶ್ರೀನಿವಾಸ ಪೂಜಾರಿ ಹೇಳಿದರು.

Related Posts

Leave a Reply

Your email address will not be published.