ಜಗದೀಶ್ ಶೆಟ್ಟರ್ ಬಿಜೆಪಿಗೆ ಮರು ಸೇರ್ಪಡೆ ಖುಷಿ ಕೊಟ್ಟಿದೆ : ಕೋಟ ಶ್ರೀನಿವಾಸ ಪೂಜಾರಿ
ಜಗದೀಶ್ ಶೆಟ್ಟರ್ ಅವರು ಬಿಜೆಪಿಗೆ ಮರಳುತ್ತಾರೆ ಎಂಬ ನಿರೀಕ್ಷೆ ಇತ್ತು. ನಮ್ಮ ಸಿದ್ದಾಂತದ ಜೊತೆ ಸುದೀರ್ಘಕಾಲ ಗುರುತಿಸಿಕೊಂಡಿದ್ದವರು. ಶೆಟ್ಟರ್ ಅವರಂತಹ ಸೈದ್ಧಾಂತಿಕ ಹಿನ್ನೆಲೆಯವರಿಗೆ ಬೇರೆ ಪಕ್ಷ ಒಗ್ಗಿಕೊಳ್ಳಲು ಕಷ್ಟ. ಪಕ್ಷದ ಶಕ್ತಿ ವೃದ್ಧಿಯಾಗುತ್ತದೆ ಎಂಬ ವಿಶ್ವಾಸವಿದೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಅವರು ಉಡುಪಿಯಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಜಗದೀಶ್ ಶೆಟ್ಟರ್ ಮರು ಸೇರ್ಪಡೆಯಿಂದ ಮತ್ತಷ್ಟು ನಾಯಕರು ಬಿಜೆಪಿಗೆ ಮರಳುತ್ತಾರೆ. ಶೆಟ್ಟರ್ ಅವರಿಗೆ ಸುದೀರ್ಘ ರಾಜಕೀಯ ಅನುಭವವಿದೆ. ಜನಸಂಘದ ಕಾಲದಿಂದಲೂ ಬಿಜೆಪಿ ಕಟ್ಟಿದವರು. ಅವರ ಮರು ಆಗಮನದಿಂದ ಖುಷಿ ತಂದಿದೆ ಎಂದರು.
ಕಾಂಗ್ರೆಸ್ ಪಕ್ಷ ಎಷ್ಟೇ ಅವಕಾಶ ಮಾಡಿಕೊಟ್ಟರೂ ಶೆಟ್ಟರ್ ಅವರನ್ನು ಸಿಎಂ ಮಾಡಿದ್ದ ಬಿಜೆಪಿ ಪಕ್ಷ, ಅಧಿಕಾರಕ್ಕಿಂತ ಹೆಚ್ಚಾಗಿ ನನಗೆ ಸಮಧಾನ ಬೇಕು ಎಂದು ಬಿಜೆಪಿಗೆ ಮರಳಿದ್ದಾರೆ. ಸಣ್ಣಪುಟ್ಟ ಮುನಿಸಿದ್ದರೂ ಸಿದ್ಧಾಂತಕಕ್ಕೆ ಬದ್ಧತೆ ಇದೆ ಎಂಬುವುದಕ್ಕೆ ಶೆಟ್ಟರ್ ಸಾಕ್ಷಿ ಎಂದ ಅವರು, ಸವದಿ ಬಿಜೆಪಿ ಮರು ಸೇರ್ಪಡೆ ಬಗ್ಗೆಯೂ ಚರ್ಚೆಯಾಗುತ್ತಿದೆ. ಲಕ್ಷ್ಮಣ್ ಸವದಿ ಕೂಡ ಶೆಟ್ಟರ್ ಹಾದಿ ತುಳಿಯುತ್ತಾರೆ ಎಂಬ ವಿಶ್ವಾಸವಿದೆ ಎಂದು ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.