ಉಡುಪಿ: ಏ.3ರಂದು ಕೋಟ ಶ್ರೀನಿವಾಸ ಪೂಜಾರಿ ನಾಮಪತ್ರ ಸಲ್ಲಿಕೆ
ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಏ.3ರಂದು ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಕೇಂದ್ರ ಮಾಜಿ ಸಚಿವ, ಹಿಂದೂ ಫೈರ್ ಬ್ರಾಂಡ್ ಬಸನಗೌಡ ಪಾಟೀಲ್ ಯತ್ನಾಳ್, ಸಿಟಿ ರವಿ, ಸುನೀಲ್ ಕುಮಾರ್ ಈ ಸಂದರ್ಭದಲ್ಲಿ ಭಾಗಿಯಾಗಲಿದ್ದಾರೆ. ಉಡುಪಿ ಶಾಸಕ ಯಶ್ ಪಾಲ್ ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ಗುರುರಾಜ್ ಗಂಟಿಹೊಳೆ, ಚಿಕ್ಕಮಗಳೂರಿನ ನಾಲ್ವರು ಮಾಜಿ ಶಾಸಕರು ಕಾರ್ಯಕರ್ತರ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ನಾಮಪತ್ರ ಸಲ್ಲಿಕೆಗೆ ಮೊದಲು ಕಡಿಯಾಳಿ ಜಿಲ್ಲಾ ಬಿಜೆಪಿ ಕಚೇರಿ ಸಮೀಪ ಬಹಿರಂಗ ಸಭೆ ನಡೆಯಲಿದೆ.