ಆದರ್ಶ ಆಸ್ಪತ್ರೆ ಸೂಪರ್ ಸ್ಪೆಷಾಲಿಟಿ ಸೆಂಟರ್ ನಲ್ಲಿ ಕೋಟಿ ಕಂಠ ಗಾಯನ

ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಇಂಧನ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವ ವಿ. ಸುನಿಲ್ ಕುಮಾರ್ ನೇತೃತ್ವದಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ರಾಜ್ಯಾದ್ಯಂತ ಹಮ್ಮಿಕೊಂಡಿರುವ ಕೋಟಿ ಕಂಠ ಗಾಯನ ಕಾರ್ಯಕ್ರಮವು ಕರಾವಳಿಯ ವಿವಿಧ ಭಾಗಗಳಲ್ಲಿ ಅತ್ಯುತ್ತಮವಾಗಿ ನಡೆಯಿತು.

ಉಡುಪಿಯ ಪ್ರಖ್ಯಾತ ಆರೋಗ್ಯ ಸಂಸ್ಥೆ ಆದರ್ಶ ಆಸ್ಪತ್ರೆ ಸೂಪರ್ ಸ್ಪೆಷಾಲಿಟಿ ಸೆಂಟರ್‍ನಲ್ಲಿ ಕೋಟಿ ಕಂಠ ಗಾಯನ ಕಾರ್ಯಕ್ರಮವು ಆದರ್ಶ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ. ಜಿ ಎಸ್ ಚಂದ್ರಶೇಖರ್ ನೇತೃತ್ವದಲ್ಲಿ ಜರುಗಿತ್ತು. ಆದರ್ಶ ಆಸ್ಪತ್ರೆಯ ಆಡಳಿತ ಮತ್ತು ಸಿಬ್ಬಂದಿ ವರ್ಗದವರು ಹಾಗೂ ಶ್ರೀ ಆದರ್ಶ ನರ್ಸಿಂಗ್ ಮತ್ತು ಪ್ಯಾರಾಮೆಡಿಕಲ್ ಸೈನ್ಸ್ ಕಾಲೇಜಿನ ವಿದ್ಯಾರ್ಥಿಗಳು ಕೋಟಿ ಕಂಠ ಗಾಯನದಲ್ಲಿ ಪಾಲ್ಗೊಂಡು, ರಾಷ್ಟ್ರಕವಿ ಕುವೆಂಪು ವಿರಚಿತ ನಾಡಗೀತೆಯನ್ನು ಹಾಡುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಯಾಗಿಸಿದರು. ಕನ್ನಡ ಭಾಷೆ, ಸಂಸ್ಕøತಿಯ ಉಳಿವು ಮತ್ತು ಕನ್ನಡ ಮನಸುಗಳ ಜೋಡಿಸುವಿಕೆಯಂತಹ ಮೂಲ ಉದ್ದೇಶವನ್ನು ಹೊಂದಿರುವ ವಿಶೇಷವಾದ ಕಾರ್ಯಕ್ರಮವೇ `ಕೋಟಿ ಕಂಠ ಗಾಯನ’. ಈ ಕಾರ್ಯಕ್ರಮವು ರಾಜ್ಯದೆಲ್ಲೆಡೆ ಕನ್ನಡ ಭಾಷೆಯ ಮೇಲಿರುವ ಪ್ರೀತಿಯನ್ನು ಸಾರುವಂತ್ತಿತ್ತು.

Related Posts

Leave a Reply

Your email address will not be published.