ಸುರತ್ಕಲ್ ನ ಕೃಷ್ಣಾಪುರದಲ್ಲಿ ಚೂರಿ ಇರಿತ: ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಮೃತ್ಯು

ವ್ಯಕ್ತಿಯೊಬ್ಬರಿಗೆ ದುಷ್ಕರ್ಮಿಗಳು ಚೂರಿ ಇರಿದು ಪರಾರಿಯಾಗಿರುವ ಘಟನೆ ಸುರತ್ಕಲ್ ಸಮೀಪದ ಕಾಟಿಪಳ್ಳ ಬಳಿ ಶನಿವಾರ ರಾತ್ರಿ ನಡೆದಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಮೃತಪಟ್ಟಿದ್ದಾರೆ.
ಮೃತ ವ್ಯಕ್ತಿಯನ್ನು ಕಾಟಿಪಳ್ಳ ನಿವಾಸಿ ಜಲೀಲ್ ಎಂದು ಗುರುತಿಸಲಾಗಿದೆ.
ದುಷ್ಕರ್ಮಿಗಳು ಏಕಾಏಕಿ ದಾಳಿ ಮಾಡಿ ಚೂರಿ ಇರಿದು ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ.
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಜಲೀಲ್ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಘಟನಾ ಸ್ಥಳಕ್ಕೆ ಸುರತ್ಕಲ್ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.ನಗರ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.
ಘಟನೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಪಣಂಬೂರು ಹಾಗೂ ಸುರತ್ಕಲ್ ಠಾಣಾ ವ್ಯಾಪ್ತಿಯಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗಿದೆ. ಇದರಿಂದ ಕ್ರಿಸ್ಮಸ್ ಆಚರಣೆಗೆ ವಿನಾಯಿತಿ ನೀಡಲಾಗಿದೆ ಎಂದು ಪೊಲೀಸ್ ಆಯುಕ್ತ ಶಶಿಕುಮಾರ್ ತಿಳಿಸಿದ್ದಾರೆ.