ಸುಬ್ರಹ್ಮಣ್ಯ: ಕರ್ನಾಟಕ ಜನತೆಯ ಸುಭೀಕ್ಷೆಗಾಗಿ ಧಾರ್ಮಿಕ ಕ್ಷೇತ್ರಕ್ಕೆ ಭೇಟಿ: ಸಿಎಂ ಬೊಮ್ಮಾಯಿ
ದ.ಕ ಜಿಲ್ಲೆಯ ಹಲವು ದೇವಸ್ಥಾನಕ್ಕೆ ಬೇಟಿ ನೀಡಿದ್ದೇನೆ. ಧರ್ಮಸ್ಥಳ, ಕೊಲ್ಲೂರು, ಕಟೀಲು ದೇವಸ್ಥಾನಗಳಿಗೆ ಹೆಚ್ಚಾಗಿ ಭೇಟಿ ನೀಡುತಿದ್ದು ಇಂದು ಕುಕ್ಕೆಶ್ರೀ ಸುಬ್ರಹ್ಮಣ್ಯ ಕ್ಕೆ ಭೇಟಿ ನೀಡಿ ಕರ್ನಾಟಕ ಜನತೆಯ ಸುಭೀಕ್ಷೆಗಾಗಿ ಪ್ರಾರ್ಥಿಸಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದರು. ಅವರು ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ಮಾದ್ಯಮದೊಂದಿಗೆ ಹೇಳಿದರು.
ಧರ್ಮಸ್ಥಳ ಕ್ಕೆ ಆಗಮಿಸಿದ ಬಳಿಕ ಹೆಲಿಕಾಪ್ಟರ್ ಮೂಲಕ ಬಿಳಿನೆಲೆಗೆ ಆಗಮಿಸಿ ಸುಬ್ರಹ್ಮಣ್ಯಕ್ಕೆ ಬಂದಿದ್ದು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾಮ್ ಸುಳ್ಳಿ ಹಾಗೂ ಕಾರ್ಯನಿರ್ವಾಹಣಾಧಿಕಾರಿ ಡಾ. ನಿಂಗಯ್ಯ ಹೂ ಗುಚ್ಚ ನೀಡಿ ಸ್ವಾಗತಿಸಿದರು. ಮುಖ್ಯಮಂತ್ರಿ ಆಡಳಿತ ಕಛೇರಿಗೆ ತೆರಳಿ ವಸ್ರ್ತ ಬದಲಿಸಿ ದೇವಸ್ಥಾನಕ್ಕೆ ತೆರಳಿದರು. ದೇವರಿಗೆ ಪೂಜೆ ಸಲ್ಲಿಸಿ ದೇವರ ದರ್ಶನ ಪಡೆದರು. ಬಳಿಕ ಸಂಪುಟ ನರಸಿಂಹ ಸ್ವಾಮಿ ದೇವರ ದರ್ಶನ ಪಡೆದರು. ಹೊಸಲಿಗಮ್ಮ ದೈವದ ದರ್ಶನ ಪಡೆದು ಅಲ್ಲಿಂದ ನಿರ್ಗಮಿಸಿದರು. ವ್ಯವಸ್ಥಾಪನ ಸಮಿತಿಯ ಶೋಭಾ ಗಿರಿಧರ್, ವನಜಾ ಭಟ್, ಮಾಸ್ಟರ್ ಪ್ಲಾನ್ ಸದಸ್ಯ ಮನೋಜ್ ಕುಮಾರ್, ಮೀನುಗಾರಿಕಾ ನಿಗಮದ ಅಧ್ಯಕ್ಷ ಎ.ವಿ ತೀರ್ಥರಾಮ, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ವೆಂಕಟ್ ದಂಬೆಕೋಡಿ, ಸುಳ್ಯ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ, ಬಿ.ಜೆ.ಪಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ನಗರ ಪಂಚಾಯತ್ ಅಧ್ಯಕ್ಷ ವಿನಯಕುಮಾರ್ ಕಂದಡ್ಕ, ಶ್ರೀಕುಮಾರ್, ಸಹಾಯಕ ಕಾರ್ಯನಿರ್ವಹಣಾಧಿಕಾರಿ ಪುಷ್ಪಲತಾ, ಶಿಷ್ಠಾಚಾರ ಅಧಿಕಾರಿಗಳಾದ ಜಯರಾಮ ರಾವ್, ಗೋಪಿನಾಥ ನಂಬೀಶ, ನವೀನ್, ಡಿ.ವೈ.ಎಸ್.ಪಿ ಡಾ.ವೀರಯ್ಯ ಹೀರೇಮಠ್, ಸರ್ಕಲ್ ರವೀಂದ್ರ, ತಾ.ಪಂ ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ, ನವೀನ್ ಕುಮಾರ್ ಭಂಡಾರಿ, ಕಡಬ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಪಕೀರಪ್ಪ, ಎಸ್‌ಐ ಗಳಾದ ಮಂಜುನಾಥ, ಮರಳೀಧರ ನಾಯ್ಕ್, ಸುಹಾಸ್, ಶಿವಕುಮಾರ್ ಮತ್ತಿತರರು ಉಪಸ್ಥಿತರಿದ್ದರು. ಮುಖ್ಯಮಂತ್ರಿ ಆಗಮನವಾಗುತ್ತಿದ್ದಂತೆ ಮಳೆಯ ಸಿಂಚನ ಆಗಿರುವುದು ವಿಶೇಷವಾಗಿತ್ತು.